ಸಂಗ್ರಹ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ ಒಂದೇ ದಿನ 843 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ 5,389ಕ್ಕೆ ಏರಿಕೆ

ದೇಶದಲ್ಲಿ ಸದ್ದಿಲ್ಲದೆ ಮಹಾಮಾರಿ ಕೊರೋನಾ ತಲೆ ಎತ್ತುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 843 ಹೊಸ ಪ್ರಕರಣಗಳು ಪತ್ತೆಯಾಗಿವೆ.

ನವದೆಹಲಿ: ದೇಶದಲ್ಲಿ ಸದ್ದಿಲ್ಲದೆ ಮಹಾಮಾರಿ ಕೊರೋನಾ ತಲೆ ಎತ್ತುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 843 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,94,349ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,799ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,389ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,41,58,161ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 1,02,591 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ  92,02,14,252 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.  

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 220,64,97,638 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ