ಜೆ.ಪಿ ನಡ್ಡಾ 
ದೇಶ

ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲದವರಿಗೆ ದೇಶದಲ್ಲಿ ಜಾಗವಿಲ್ಲ: ರಾಹುಲ್ ಗಾಂಧಿಗೆ ಬಿಜೆಪಿ ಅಧ್ಯಕ್ಷ ನಡ್ಡಾ ತಿರುಗೇಟು

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಭಾನುವಾರ ರಾಹುಲ್ ಗಾಂಧಿ ಅವರು ಪ್ರಜಾಪ್ರಭುತ್ವದ ಎಲ್ಲ ಮಿತಿಗಳನ್ನು ಮೀರಿದ್ದಾರೆ ಮತ್ತು ಅವರನ್ನು ಪ್ರಜಾಪ್ರಭುತ್ವ ರಾಷ್ಟ್ರದಿಂದ ಗಂಟುಮೂಟೆ ಕಟ್ಟಿಸಿ ದೂರಕ್ಕೆ ಕಳುಹಿಸಬೇಕು ಎಂದು ಹೇಳಿದರು.

ನವದೆಹಲಿ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಭಾನುವಾರ ರಾಹುಲ್ ಗಾಂಧಿ ಅವರು ಪ್ರಜಾಪ್ರಭುತ್ವದ ಎಲ್ಲ ಮಿತಿಗಳನ್ನು ಮೀರಿದ್ದಾರೆ ಮತ್ತು ಅವರನ್ನು ಪ್ರಜಾಪ್ರಭುತ್ವ ರಾಷ್ಟ್ರದಿಂದ ಗಂಟುಮೂಟೆ ಕಟ್ಟಿಸಿ ದೂರಕ್ಕೆ ಕಳುಹಿಸಬೇಕು ಎಂದು ಹೇಳಿದರು.

'ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲದವರಿಗೆ ಪ್ರಜಾಪ್ರಭುತ್ವದಲ್ಲಿ ಸ್ಥಾನವಿಲ್ಲ' ಎಂದು ನಡ್ಡಾ ಅವರು ಚೆನ್ನೈನಲ್ಲಿ ನಡೆಯುತ್ತಿರುವ ತಮ್ಮ ಪಕ್ಷದ ಭಾರತೀಯ ಜನತಾ ಯುವ ಮೋರ್ಚಾದ 'ರಾಷ್ಟ್ರೀಯ ಯುವ ಸಂಸತ್' ಅನ್ನು ಉದ್ಘಾಟಿಸಿದ ನಂತರ ತಮ್ಮ ಭಾಷಣದಲ್ಲಿ ಹೇಳಿದರು.

'ಕಾಂಗ್ರೆಸ್ ಮಾನಸಿಕವಾಗಿ ದಿವಾಳಿಯಾಗಿದೆ. ಭಾರತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಹೇಳುವ ಮೂಲಕ ಭಾರತದ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಲು ಯುಎಸ್ ಮತ್ತು ಯುರೋಪಿಯನ್ ರಾಷ್ಟ್ರಗಳಂತಹ ವಿದೇಶಿ ಶಕ್ತಿಗಳನ್ನು 'ಪ್ರಚೋದನೆ' ಮಾಡಿದ್ದಾರೆ' ಎಂದು ನಡ್ಡಾ ಆರೋಪಿಸಿದರು.

ರಾಹುಲ್ ಗಾಂಧಿ ಅವರು ಪ್ರಜಾಪ್ರಭುತ್ವದ ಎಲ್ಲ ಗಡಿಗಳನ್ನು ದಾಟಿದ್ದಾರೆ. ಅವರು ಯಾವ ರೀತಿಯ ಹೇಳಿಕೆಗಳನ್ನು ನೀಡುತ್ತಾರೆ ಎಂದರೆ, ಭಾರತದ ಜನರು ಅವರ ಮಾತನ್ನು ಕೇಳುವುದಿಲ್ಲ. ಆದರೆ, ಅವರನ್ನು ಸಹಿಸಿಕೊಳ್ಳುತ್ತಾರೆ ಎಂದು ಹೇಳಿದರು.

ರಾಹುಲ್ ಗಾಂಧಿ ಅವರು ಭಾರತದ ಪ್ರಜಾಸತ್ತಾತ್ಮಕ ಮೌಲ್ಯಗಳ ಬಗ್ಗೆ ನಾಚಿಕೆಗೇಡಿನ ಹೇಳಿಕೆಗಳ ಮೂಲಕ ಕೇವಲ ರಾಷ್ಟ್ರವನ್ನು ಅವಮಾನಿಸಿಲ್ಲ. ಬದಲಿಗೆ, ನಮ್ಮ ದೇಶದಲ್ಲಿ ಮಧ್ಯಪ್ರವೇಶಿಸುವಂತೆ ವಿದೇಶಿ ರಾಷ್ಟ್ರಗಳನ್ನು ಆಹ್ವಾನಿಸಿದ್ದಾರೆ ಎಂದು ಬಿಜೆಪಿ ಅಧ್ಯಕ್ಷರು ಹೇಳಿದರು.

ಬ್ರಿಟನ್‌ನಲ್ಲಿ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗೆ ಸಂಸತ್ತಿನಲ್ಲಿ ಕ್ಷಮೆಯಾಚಿಸಬೇಕು ಎಂದು ಆಡಳಿತ ಪಕ್ಷದ ಸದಸ್ಯರು ಪಟ್ಟುಹಿಡಿದಿದ್ದರೆ, ಕಾಂಗ್ರೆಸ್, ಬಿಜೆಪಿಯ ಆರೋಪವನ್ನು ತಿರಸ್ಕರಿಸಿದೆ. ಅದಾನಿ ವಿಷಯದಿಂದ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ತನ್ನ ಹೇಳಿಕೆಗಳನ್ನು ತಪ್ಪಾಗಿ ಬಿಂಬಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಮಾರ್ಚ್ 13 ರಂದು ಆರಂಭವಾದ ಸಂಸತ್ತಿನ ಬಜೆಟ್ ಅಧಿವೇಶನವು ಇದೇ ವಿಚಾರವಾಗಿ ಮುಂದೂಡುತ್ತಲೇ ಬಂದಿದೆ. 

ಯುಕೆಯಲ್ಲಿ ತಮ್ಮ ಸಂವಾದದ ಸಂದರ್ಭದಲ್ಲಿ, ರಾಹುಲ್ ಗಾಂಧಿ ಅವರು ಭಾರತೀಯ ಪ್ರಜಾಪ್ರಭುತ್ವದ ರಚನೆಗಳು ದಾಳಿಗೆ ಒಳಗಾಗಿವೆ ಮತ್ತು ದೇಶದ ಸಂಸ್ಥೆಗಳ ಮೇಲೆ 'ಪೂರ್ಣ ಪ್ರಮಾಣದ ಆಕ್ರಮಣ' ನಡೆಯುತ್ತಿದೆ ಎಂದು ಆರೋಪಿಸಿದರು.

ಗಾಂಧಿಯವರ ಟೀಕೆಗಳು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಅವರು ವಿದೇಶಿ ನೆಲದಲ್ಲಿ ಭಾರತವನ್ನು ಕೆಣಕುತ್ತಿದ್ದಾರೆ ಮತ್ತು ವಿದೇಶಿ ಹಸ್ತಕ್ಷೇಪಗಳನ್ನು ಬಯಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ ಮತ್ತು ಪ್ರಧಾನಿ ನರೇಂದ್ರ ಮೋದಿ ವಿದೇಶದಲ್ಲಿ ಆಂತರಿಕ ರಾಜಕೀಯವನ್ನು ಎತ್ತುವ ಉದಾಹರಣೆಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಆಡಳಿತ ಪಕ್ಷಕ್ಕೆ ತಿರುಗೇಟು ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT