ಇಂಟರ್ ನೆಟ್ ಮೇಲಿನ ನಿರ್ಬಂಧ ವಿಸ್ತರಿಸಿದ ಪಂಜಾಬ್
ಪಂಜಾಬ್ ಸರ್ಕಾರ ಇಂಟರ್ ನೆಟ್ ನಿಷೇಧವನ್ನು ವಿಸ್ತರಿಸಿದೆ. ಸೋಮವಾರದವರೆಗೂ ಮೊಬೈಲ್ ಇಂಟರ್ ನೆಟ್ ಹಾಗೂ ಎಸ್ಎಂಎಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಚಂಡೀಗಢ: ಪಂಜಾಬ್ ಸರ್ಕಾರ ಇಂಟರ್ ನೆಟ್ ನಿಷೇಧವನ್ನು ವಿಸ್ತರಿಸಿದೆ. ಸೋಮವಾರದವರೆಗೂ ಮೊಬೈಲ್ ಇಂಟರ್ ನೆಟ್ ಹಾಗೂ ಎಸ್ಎಂಎಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಸಿಖ್ ಸಮುದಾಯದ ತೀವ್ರಗಾಮಿ ಹಾಗೂ ಖಲಿಸ್ತಾನ ಬೆಂಬಲಿಗ ಅಮೃತ್ ಪಾಲ್ ಸಿಂಗ್ ಗೆ ಶೋಧಕಾರ್ಯಾಚರಣೆ ಮುಂದುವರೆಗಿದೆ.
ಪೊಲೀಸ್ ಅಧಿಕಾರಿಗಳು ಶೋಧಕಾರ್ಯಾಚರಣೆ ಬಗ್ಗೆ ಮಾತನಾಡಿದ್ದು, ಶೀಘ್ರವೇ ಬಂಧಿಸಲಾಗುತ್ತದೆ ಎಂದು ಹೇಳಿದ್ದಾರೆ.
ಬ್ಯಾಂಕಿಂಗ್ ಸೇವೆಗಳಿಗೆ ಆಸ್ಪತ್ರೆ ಸೇವೆಗಳು ಹಾಗೂ ಇನ್ನಿತರ ಬ್ರಾಡ್ ಬ್ಯಾಂಡ್ ಸೇವೆಗಳನ್ನು ನಿರ್ಬಂಧಿಸಲಾಗಿಲ್ಲ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.