ದೇಶ

ವಿದೇಶಿ ದೇಣಿಗೆ ಕಾಯ್ದೆ ಉಲ್ಲಂಘನೆ: ಹರ್ಷ ಮಂದರ್ ಎನ್‌ಜಿಒ ವಿರುದ್ಧ ಸಿಬಿಐ ತನಿಖೆಗೆ ಕೇಂದ್ರ ಶಿಫಾರಸು

Lingaraj Badiger

ನವದೆಹಲಿ: ವಿದೇಶಿ ದೇಣಿಗೆ(ನಿಯಂತ್ರಣ) ಕಾಯ್ದೆ ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಲೇಖಕ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಹರ್ಷ ಮಂದರ್ ಅವರ ಎನ್‌ಜಿಒ ಅಮನ್ ಬಿರಾದಾರಿ ವಿರುದ್ಧ ಕೇಂದ್ರ ಗೃಹ ಸಚಿವಾಲಯ(ಎಂಎಚ್‌ಎ) ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಸೋನಿಯಾ ಗಾಂಧಿ ನೇತೃತ್ವದ ರಾಷ್ಟ್ರೀಯ ಸಲಹಾ ಮಂಡಳಿಯ ಸದಸ್ಯರಾಗಿದ್ದ ಮಂದರ್ ಅವರು ಅಮನ್ ಬಿರಾದಾರಿ ಎಂಬ ಎನ್ ಜಿಒ ಸ್ಥಾಪಿಸಿದ್ದರು.

ವಿದೇಶಿ ದೇಣಿಗೆ(ನಿಯಂತ್ರಣ) ಕಾಯ್ದೆಯ ವಿವಿಧ ನಿಬಂಧನೆಗಳ ಉಲ್ಲಂಘನೆಗಾಗಿ ಅಮನ್ ಬಿರಾದಾರಿ ವಿರುದ್ಧ ಸಿಬಿಐ ತನಿಖೆಗೆ ಶಿಫಾರಸು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ವಿದೇಶಿ ದೇಣಿಗೆ ಪಡೆಯುವ ಎಲ್ಲಾ ಎನ್‌ಜಿಒಗಳು ಎಫ್‌ಸಿಆರ್‌ಎ ಅಡಿಯಲ್ಲಿ ಗೃಹ ಸಚಿವಾಲಯದಲ್ಲಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು.

SCROLL FOR NEXT