ಪ್ರಧಾನಿ ಮೋದಿ ಮತ್ತು ಜಪಾನ್ ಪ್ರಧಾನಿ ಕಿಷಿದಾ 
ದೇಶ

ಮೋದಿ-ಕಿಷಿಡಾ ಭೇಟಿ; ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ-ಸ್ಥಿರತೆ, ವಿಶ್ವಾಸಾರ್ಹ ಪೂರೈಕೆ ಸರಪಳಿ ಬಲಪಡಿಸುವಿಕೆ ಕುರಿತು ಭಾರತ-ಜಪಾನ್ ಮಹತ್ವದ ಚರ್ಚೆ

ಭಾರತ ಪ್ರಧಾನಿ ನರೇಂದ್ರ ಮೋದಿ ಮತ್ತು ಜಪಾನ್ ಪ್ರಧಾನಿ ಫುಮಿಯೋ ಕಿಷಿಡಾ ಭೇಟಿಯಾಗಿದ್ದು, ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ-ಸ್ಥಿರತೆ, ವಿಶ್ವಾಸಾರ್ಹ ಪೂರೈಕೆ ಸರಪಳಿ ಬಲಪಡಿಸುವಿಕೆ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ.

ನವದೆಹಲಿ: ಭಾರತ ಪ್ರಧಾನಿ ನರೇಂದ್ರ ಮೋದಿ ಮತ್ತು ಜಪಾನ್ ಪ್ರಧಾನಿ ಫುಮಿಯೋ ಕಿಷಿಡಾ ಭೇಟಿಯಾಗಿದ್ದು, ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ-ಸ್ಥಿರತೆ, ವಿಶ್ವಾಸಾರ್ಹ ಪೂರೈಕೆ ಸರಪಳಿ ಬಲಪಡಿಸುವಿಕೆ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ.

ಕಿಶಿದಾ ಅವರು 27 ಗಂಟೆಗಳ ಭಾರತ ಭೇಟಿಗಾಗಿ ಸೋಮವಾರ ಬೆಳಿಗ್ಗೆ ನವದೆಹಲಿಗೆ ಬಂದಿಳಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಜಪಾನ್‌ ಪ್ರಧಾನಿ ಕಿಶಿದಾ ಅವರು ವಿವಿಧ ಕ್ಷೇತ್ರಗಳಲ್ಲಿ ಎರಡೂ ದೇಶಗಳ ಸಹಕಾರಗಳ ಕುರಿತು ಇಲ್ಲಿನ ಹೈದರಾಬಾದ್‌ ಹೌಸ್‌ನಲ್ಲಿ ಮಾತುಕತೆ ನಡೆಸಿದರು. ಬಳಿಕ ಮಾತನಾಡಿದ ಜಪಾನ್ ಪ್ರಧಾನಿ ಕಿಷಿದಾ ಅವರು, ‘ಹಿಂದೂ ಮಹಾಸಾಗರ–ಪೆಸಿಫಿಕ್‌ ಪ್ರದೇಶದಲ್ಲಿರುವ ದೇಶಗಳ ಆರ್ಥಿಕತೆಗೆ (ಕಾರ್ಖಾನೆ ಸ್ಥಾಪನೆಯಿಂದ ವಿಪತ್ತು ತಡೆವರೆಗೆ) ಸಹಾಯ ಮಾಡುವ ಉದ್ದೇಶದಿಂದ 75 ಬಿಲಿಯನ್‌ ಡಾಲರ್‌ನಷ್ಟು (ಅಂದಾಜು 6.15 ಲಕ್ಷ ಕೋಟಿ) ಹೂಡಿಕೆ ಮಾಡಲಾಗುವುದು. ನಮ್ಮ ಗುರಿಯನ್ನು ತಲುಪುವಲ್ಲಿ ಭಾರತವು ಮುಖ್ಯವಾದ ಪಾತ್ರವಹಿಸಲಿದೆ’ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ ಅವರು, ‘ಭಾರತ–ಜಪಾನ್‌ನ ಪಾಲುದಾರಿಕೆಯು ಎರಡೂ ದೇಶಗಳಿಗೆ ಮಾತ್ರ ಮುಖ್ಯವಾದುದಲ್ಲ. ಬದಲಿಗೆ ಹಿಂದೂ ಮಹಾಸಾಗರ–ಪೆಸಿಫಿಕ್‌ ‍ಪ್ರದೇಶದಲ್ಲಿ ಶಾಂತಿ, ಸ್ಥಿರತೆ ನೆಲೆಸುವಲ್ಲಿಯೂ ನಮ್ಮ ಸಂಬಂಧ ಮುಖ್ಯ ಪಾತ್ರವಹಿಸುತ್ತದೆ. ಈ ಪ್ರದೇಶದಲ್ಲಿ ಹೆಚ್ಚುತ್ತಿರುವ ಚೀನಾದ ಆಕ್ರಮಣಕಾರಿ ವರ್ತನೆಯನ್ನು ತಡೆಯಲು ಈ ದೇಶಗಳ ಜೊತೆಗೆ ಸ್ನೇಹವನ್ನು ಗಟ್ಟಿ ಮಾಡಿಕೊಳ್ಳುವ ಉದ್ದೇಶದಿಂದ ಕಿಶಿದಾ ಅವರು ಈ ಯೋಜನೆಯ ಘೋಷಣೆ ಮಾಡಿದ್ದಾರೆ ಎನ್ನಲಾಗಿದೆ.

‘ಭಾರತದ ತಯಾರಿಕಾ ವಲಯದಲ್ಲಿ ಅಗಾಧವಾದ ಅವಕಾಶಗಳು ಹಾಗೂ ಅನುಕೂಲತೆಗಳು ಇವೆ. ಆದ್ದರಿಂದ ಭಾರತದ ತಯಾರಿಕಾ ವಲಯದಲ್ಲಿ ಹೂಡಿಕೆ ಮಾಡಲು ಜಪಾನ್‌ ಕಂಪೆನಿಗಳನ್ನು ಭಾರತವು ಆಹ್ವಾನಿಸಿತು. ‘ಮೇಕ್‌ ಇನ್‌ ಇಂಡಿಯಾ’ ಯೋಜನೆಯು ಭಾರತಕ್ಕಷ್ಟೇ ಸೀಮಿತವಲ್ಲ ಎಂದು ಮೋದಿ ಹೇಳಿದ್ದಾರೆ.

ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ವಿನಯ್‌ ಕ್ವಾತ್ರಾ ಮಾತನಾಡಿ, 'ರಕ್ಷಣಾ ಕ್ಷೇತ್ರ–ವಿದೇಶಿ ನೇರ ಹೂಡಿಕೆಗೆ ಭಾರತ ಮುಕ್ತ: ‘ಮೋದಿ ಹಾಗೂ ಕಿಶಿದಾ ಅವರ ನಡುವೆ ರಕ್ಷಣಾ ಉಪಕರಣಗಳು ಮತ್ತು ಸೆಮಿಕಂಡಕ್ಟರ್‌ಗಳ ತಯಾರಿಕೆ, ಆರ್ಥಿಕ ಸಹಭಾಗಿತ್ವ, ಹವಾಮಾನ ಹಾಗೂ ಇಂಧನ ಕುರಿತಾಗಿ ಚರ್ಚೆಗಳು ನಡೆದವು. ರಕ್ಷಣಾ ಕ್ಷೇತ್ರದಲ್ಲಿ ಖಾಸಗಿ ಬಂಡವಾಳ ಹೂಡಿಕೆ ಹಾಗೂ ವಿದೇಶಿ ನೇರ ಹೂಡಿಕೆಗೆ ಭಾರತವು ಮುಕ್ತವಾಗಿದೆ’ ಎಂದು ಅವರು ಮಾಹಿತಿ ನೀಡಿದರು.

ಉಕ್ರೇನ್‌ ಮೇಲೆ ರಷ್ಯಾ ನಡೆಸುತ್ತಿರುವ ಯುದ್ಧವನ್ನು ಆದಷ್ಟು ಬೇಗ ನಿಲ್ಲಿಸಬೇಕು. ಇದಕ್ಕಾಗಿ ಜಗತ್ತಿನ ದಕ್ಷಿಣ ಭಾಗದ ರಾಷ್ಟ್ರಗಳು ಒಗ್ಗಟ್ಟು ಪ್ರದರ್ಶಿಸಬೇಕು. ಆದರೆ, ಉಕ್ರೇನ್‌ ಯುದ್ಧದ ಕುರಿತು ಭಾರತ ಹಾಗೂ ಜಪಾನ್‌ ನಿಲುವಿನಲ್ಲಿ ವ್ಯತ್ಯಾಸವಿದೆ. ಮುಂಬೈ–ಅಹಮದಾಬಾದ್‌ ನಡುವಿನ ಬುಲೆಟ್‌ ರೈಲು ಯೋಜನೆಗೆ ಜಪಾನ್‌ ನೀಡುವ ನಾಲ್ಕನೇ ಕಂತಿನ ಸಾಲಕ್ಕೆ (ಸುಮಾರು 18 ಸಾವಿರ ಕೋಟಿ) ಸಂಬಂಧಿಸಿದ ಟಿಪ್ಪಣಿಯನ್ನು ಎರಡು ದೇಶಗಳು ವಿನಿಮಯ ಮಾಡಿಕೊಂಡಿವೆ. ಇದೇ ಮೇನಲ್ಲಿ ಜಪಾನ್‌ನ ಹಿರೋಷಿಮಾದಲ್ಲಿ ನಡೆಯಲಿರುವ ಜಿ7 ಶೃಂಗಸಭೆಗೆ ಪ್ರಧಾನಿ ಮೋದಿ ಅವರನ್ನು ಕಿಶಿದಾ ಆಹ್ವಾನಿಸಿದರು ಎಂದು ಪ್ರಧಾನಿ ಕಚೇರಿ ಮಾಹಿತಿ ನೀಡಿದೆ.

ಕಿಶಿದಾ ಅವರಿಗೆ ಕರ್ನಾಟಕದಲ್ಲಿ ತಯಾರಾದ ಬುದ್ಧನ ವಿಗ್ರಹ ಉಡುಗೊರೆ
ಜಪಾನ್‌ ಪ್ರಧಾನಿ ಕಿಶಿದಾ ಅವರಿಗೆ ಕರ್ನಾಟಕದ ಕಲಾವಿದ ಶ್ರೀಗಂಧದಿಂದ ತಯಾರಿಸಿದ ಬುದ್ಧನ ವಿಗ್ರಹವನ್ನು ಉಡುಗೊರೆ ನೀಡಿದ್ದು, ಕದಂಬ ಮರದಲ್ಲಿ ತಯಾರಿಸಲಾದ ಜಾಲಿ ಪೆಟ್ಟಿಗೆಯಲ್ಲಿ ಒಳಗೆ ಧ್ಯಾನ ಮುದ್ರೆಯಲ್ಲಿರುವ ಬುದ್ಧನ ವಿಗ್ರಹವನ್ನು ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT