ಸಂಗ್ರಹ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿಂದು 699 ಹೊಸ ಕೇಸ್ ಪತ್ತೆ, 2 ಸಾವು

ದೇಶದಲ್ಲಿ ಸದ್ದಿಲ್ಲದೆ ಮಹಾಮಾರಿ ಕೊರೋನಾ ತಲೆ ಎತ್ತುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 699 ಹೊಸ ಪ್ರಕರಣಗಳು ಪತ್ತೆಯಾಗಿವೆ.

ನವದೆಹಲಿ: ದೇಶದಲ್ಲಿ ಸದ್ದಿಲ್ಲದೆ ಮಹಾಮಾರಿ ಕೊರೋನಾ ತಲೆ ಎತ್ತುತ್ತಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 699 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,97,037ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,808ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6,559ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,41,59,617ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 97,866 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ  92,04,44,854 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.  

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ  220,65,13,507 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ