ದೇಶ

ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆ ಪ್ರಧಾನಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

Srinivas Rao BV

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. 

ಕೋವಿಡ್ ಸೋಂಕು ಪ್ರಕರಣಗಳು ಏರುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕ ಆರೋಗ್ಯ ಸನ್ನದ್ಧತೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ-ಅಂಶಗಳ ಪ್ರಕಾರ, ಭಾರತ ಮಾ.22 ರಂದು 1,134 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ ಒಟ್ಟು ಪ್ರಕರಣಗಳ ಸಂಖ್ಯೆ 7,026  ಕ್ಕೆ ಏರಿಕೆಯಾಗಿದೆ. 

5 ಸಾವುಗಳು ಸಂಭವಿಸಿದ್ದು ಒಟ್ಟು ಸಾವಿನ ಸಂಖ್ಯೆ 5,30,813 ಕ್ಕೆ ಏರಿಕೆಯಾಗಿದೆ. ಛತ್ತೀಸ್‌ಗಢ, ದೆಹಲಿ, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ತಲಾ ಒಂದು ಸಾವು ವರದಿಯಾಗಿದೆ ಮತ್ತು ಕೇರಳದಿಂದ ಒಂದು ಸಾವು ಸಂಭವಿಸಿದೆ. ದೈನಂದಿನ ಪಾಸಿಟೀವ್ ದರ ಶೇ.1.09ರಷ್ಟು ಇದ್ದು, ಸಾಪ್ತಾಹಿಕ  ಶೇ.0.98 ರಷ್ಟು ಅಂದಾಜಿಸಲಾಗಿದೆ.

SCROLL FOR NEXT