ದೇಶ

ಬಿಲ್ಕಿಸ್ ಪ್ರಕರಣಕ್ಕೆ ವಿಶೇಷ ಪೀಠ ರಚಿಸಲಿರುವ ಸುಪ್ರೀಂ ಕೋರ್ಟ್

Srinivas Rao BV

ನವದೆಹಲಿ: ಬಿಲ್ಕಿಸ್ ಬಾನೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪೀಠ ರಚಿಸಲು ಸುಪ್ರೀಂ ಕೋರ್ಟ್ ಮಾ.22 ರಂದು ಒಪ್ಪಿಗೆ ನೀಡಿದೆ. 

2002 ರಲ್ಲಿ ನಡೆದ ಗುಜರಾತ್ ಗಲಭೆ ಸಂದರ್ಭದಲ್ಲಿ ಬಿಲ್ಕಿಸ್ ಬಾನೋ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ 11  ಅಪರಾಧಿಗಳಿಗೆ ವಿಧಿಸಲಾಗಿದ್ದ ಶಿಕ್ಷೆಗೆ ವಿನಾಯತಿ ನೀಡಿ ಅವರನ್ನು ಬಿಡುಗಡೆ ಮಾಡಲಾಗಿತ್ತು. ಬಿಡುಗಡೆಯನ್ನು ಪ್ರಶ್ನಿಸಿ ಸಂತ್ರಸ್ತೆಯ ಪರ ವಕೀಲರು ಕೋರ್ಟ್ ಮೊರೆ ಹೋಗಿದ್ದಾರೆ.

ನ್ಯಾ.ಡಿ ವೈ ಚಂದ್ರಚೂಡ್ ಹಾಗೂ ನ್ಯಾ. ಪಿಎಸ್ ನರಸಿಂಹ, ಜೆಬಿ ಪರ್ದಿವಾಲ ಅವರಿದ್ದ ಪೀಠ ಬಿಲ್ಕಿಸ್ ಬಾನೋ ಪರ ವಕೀಲರಿಗೆ ಪ್ರಕರಣದ ಸಂಬಂಧ ಪ್ರತ್ಯೇಕ ಪೀಠ ರಚಿಸುವ ಕುರಿತು ಭರವಸೆ ನೀಡಿದ್ದಾರೆ.
 
ಬಿಲ್ಕಿಸ್ ಬಾನೋ ಪರ ವಕೀಲರಾದ ಶೋಭಾ ಗುಪ್ತಾ ಅವರು ಅರ್ಜಿಯ ತುರ್ತು ವಿಚಾರಣೆಗೆ ಮನವಿ ಮಾಡಿದ್ದರು. ಇದಕ್ಕಾಗಿ ಪ್ರತ್ಯೇಕ ಪೀಠ ರಚನೆ ಮಾಡಲಾಗುತ್ತದೆ ಎಂದು ಸಿಜೆಐ ಹೇಳಿದ್ದಾರೆ. 

ಇದಕ್ಕೂ ಮುನ್ನ, ಜನವರಿ 24 ರಂದು, ಸಂಬಂಧಪಟ್ಟ ಪಂಚ ಸದಸ್ಯ ಪೀಠದಲ್ಲಿದ್ದ ನ್ಯಾಯಾಧೀಶರು ನಿಷ್ಕ್ರಿಯ ದಯಾಮರಣಕ್ಕೆ ಸಂಬಂಧಿಸಿದ ವಿಷಯದ ವಿಚಾರಣೆಯನ್ನು ನಡೆಸುತ್ತಿದ್ದ ಕಾರಣ ಗುಜರಾತ್ ಸರ್ಕಾರ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವುದನ್ನು ಪ್ರಶ್ನಿಸಿ ಬಾನೊ ಸಲ್ಲಿಸಿದ ಅರ್ಜಿಯ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲು ಸಾಧ್ಯವಾಗಲಿಲ್ಲ. 
 

SCROLL FOR NEXT