ದೇಶ

ಭಾರತದಲ್ಲಿ ಐದು ತಿಂಗಳಲ್ಲೇ ಅತಿ ಹೆಚ್ಚು ಕೋವಿಡ್-19 ಪ್ರಕರಣ ದಾಖಲು

Nagaraja AB

ನವದೆಹಲಿ: ದೇಶದಲ್ಲಿ 140 ದಿನಗಳಲ್ಲೇ ಅತಿ ಹೆಚ್ಚು 1,300 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7,605ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ.

ಮೂವರು ಸಾವಿನೊಂದಿಗೆ ಸಾವು ಪ್ರಕರಣ 5,30,816ಕ್ಕೆ ಏರಿಕೆಯಾಗಿದೆ. ಬೆಳಗ್ಗೆ 8 ಗಂಟೆಯವರೆಗಿನ ವರದಿ ಪ್ರಕಾರ ಕರ್ನಾಟಕ, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ತಲಾ ಒಂದು ಸಾವು ವರದಿಯಾಗಿದೆ. ದೈನಂದಿನ ಪಾಸಿಟಿವಿಟಿ ದರ ಶೇ. 1.46 ರಷ್ಟಿದ್ದರೆ, ವಾರದ ಪಾಸಿಟಿವಿಟಿ ದರ ಶೇ.1. 08 ರಷ್ಟಿತ್ತು. 

ಒಟ್ಟಾರೆ ಕೋವಿಡ್ ಪ್ರಕರಣಗಳ ಸಂಖ್ಯೆ  4.46 ಕೋಟಿ (4, 46,99,418) ದಾಖಲಾಗಿದೆ.  ರಾಷ್ಟ್ರೀಯ ಕೋವಿಡ್ ಗುಣಮುಖ ದರ ಶೇ. 98.79 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 89,078 ಪರೀಕ್ಷೆ ನಡೆಸುವುದರೊಂದಿಗೆ ಇದುವರೆಗೆ ಒಟ್ಟು 92.06 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. 

ಕೋವಿಡ್ ನಿಂದ ಗುಣಮುಖರಾದವರ ಸಂಖ್ಯೆ 4,41,60,997 ಕ್ಕೆ ಏರಿಕೆಯಾಗಿದೆ. ಆದರೆ ಪ್ರಕರಣದ ಸಾವಿನ ಪ್ರಮಾಣ ಶೇಕಡಾ 1.19 ರಷ್ಟಿದೆ. ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದಡಿ  ಇದುವರೆಗೆ ದೇಶದಲ್ಲಿ 220.65 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.

SCROLL FOR NEXT