ಸುಪ್ರೀಂ ಕೋರ್ಟ್ 
ದೇಶ

ಬಹುಪತ್ನಿತ್ವ, ನಿಖಾ ಹಲಾಲ್ ಕುರಿತ ಅರ್ಜಿಗಳ ವಿಚಾರಣೆಗೆ ಪೀಠ ರಚನೆ: ಸಿಜೆಐ ಚಂದ್ರಚೂಡ್

ಬಹುಪತ್ನಿತ್ವ, ನಿಖಾ ಹಲಾಲ್ ಕುರಿತು ದಾಖಲಾಗಿರುವ ಅರ್ಜಿಗಳ ವಿಚಾರಣೆಗೆ ಮತ್ತೊಂದು ಪೀಠ ರಚನೆ ಮಾಡುವುದಾಗಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ.

ನವದೆಹಲಿ: ಬಹುಪತ್ನಿತ್ವ, ನಿಖಾ ಹಲಾಲ್ ಕುರಿತು ದಾಖಲಾಗಿರುವ ಅರ್ಜಿಗಳ ವಿಚಾರಣೆಗೆ ಮತ್ತೊಂದು ಪೀಠ ರಚನೆ ಮಾಡುವುದಾಗಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ.

ಬಹುಪತ್ನಿತ್ವ ಹಾಗೂ ನಿಖಾ ಹಲಾಲ್‌ಗೆ ಇರುವ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಗಾಗಿ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠ ರಚಿಸುವುದಾಗಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್‌ ಅವರು ಗುರುವಾರ ತಿಳಿಸಿದರು.

ಬಹುಪತ್ನಿತ್ವ ಹಾಗೂ ನಿಖಾ ಹಲಾಲ್‌ಗೆ ಅವಕಾಶ ನೀಡುವ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ 494 ಅನ್ನು ರದ್ದು ಮಾಡಬೇಕು ಮತ್ತು ಈ ಎರಡನ್ನೂ ಅಸಾಂವಿಧಾನಿಕ ಹಾಗೂ ಅಕ್ರಮ ಎಂದು ಘೋಷಿಸಬೇಕು ಎಂದು ವಕೀಲ ಅಶ್ವಿನ್‌ ಉಪಾಧ್ಯಾಯ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಪಿ.ಎಸ್‌. ನರಸಿಂಹ ಮತ್ತು ಜೆ.ಬಿ. ಪಾರ್ದೀವಾಲಾ ಅವರಿದ್ದ ಪೀಠವು ಈ ಅರ್ಜಿಯ ವಿಚಾರಣೆಯನ್ನು ನಡೆಸಿತು. 

ವಿಚಾರಣೆ ವೇಳೆ, ‘ನಾನು ಈ ಅರ್ಜಿಯನ್ನು ಪರಿಗಣನೆಗೆ ತೆಗೆದುಕೊಳ್ಳುತ್ತೇನೆ. ಮತ್ತು ಇದಕ್ಕಾಗಿ ಸಾಂವಿಧಾನಿಕ ಪೀಠವನ್ನೂ ರಚಿಸುತ್ತೇನೆ’ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಅವರು ಹೇಳಿದರು. ಇದೇ ಅರ್ಜಿಯ ಸಂಬಂಧ ಕಳೆದ ವರ್ಷ ಆಗಸ್ಟ್‌ 30ರಂದು ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠವು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ರಾಷ್ಟ್ರೀಯ ಮಹಿಳಾ ಆಯೋಗ ಹಾಗೂ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗಕ್ಕೆ ನೋಟಿಸ್‌ ನೀಡಿ, ಅರ್ಜಿಯ ಸಂಬಂಧ ಪ್ರತಿಕ್ರಿಯೆ ನೀಡುವಂತೆ ತಿಳಿಸಿತ್ತು.

ಈ ಪೀಠದಲ್ಲಿ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಹೇಮಂತ್‌ ಗುಪ್ತಾ, ಸೂರ್ಯಕಾಂತ್‌, ಎಂ.ಎಂ. ಸುಂದ್ರೇಶ್‌ ಹಾಗೂ ಸುಧಾಂಶು ಧೂಲಿಯಾ ಅವರಿದ್ದರು. ಆದರೆ, ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಹಾಗೂ ಹೇಮಂತ್‌ ಗುಪ್ತಾ ಅವರು ಅದೇ ವರ್ಷ ಸೆ.23 ಹಾಗೂ ಅ.6ರಂದು ಕ್ರಮವಾಗಿ ನಿವೃತ್ತಿ ಹೊಂದಿದರು. ಸುಮಾರು 8 ಅರ್ಜಿಗಳನ್ನು ಈ ಪೀಠವು ವಿಚಾರಣೆ ನಡೆಸುತ್ತಿತ್ತು.  ಇಬ್ಬರು ನ್ಯಾಯಮೂರ್ತಿಗಳು ನಿವೃತ್ತಿ ಹೊಂದಿದ್ದರಿಂದ ಈ ಅರ್ಜಿಗಳ ವಿಚಾರಣೆಯು ಅರ್ಧಕ್ಕೆ ನಿಂತಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT