ಶರದ್ ಪವಾರ್ 
ದೇಶ

ಶರದ್ ಪವಾರ್ ನೇತೃತ್ವದಲ್ಲಿ ಇಂದು ಸಂಜೆ ವಿಪಕ್ಷಗಳ ಸಭೆ: ಇವಿಎಂ ಕುರಿತು ಚರ್ಚೆ

ಗ್ರಾಮೀಣ ವಿದ್ಯುನ್ಮಾನ ಮತಯಂತ್ರ (ಇವಿಎಂ) ಕುರಿತು ಚರ್ಚಿಸಲು ಎನ್ ಪಿಸಿ ಮುಖ್ಯಸ್ಥ ಶರದ್ ಪವಾರ್ ಗುರುವಾರ ವಿರೋಧ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಸಂಜೆ ಪವಾರ್ ಅವರ ನಿವಾಸದಲ್ಲಿ ಸಭೆ ನಡೆಯಲಿದೆ.

ನವದೆಹಲಿ: ಗ್ರಾಮೀಣ ವಿದ್ಯುನ್ಮಾನ ಮತಯಂತ್ರ (ಇವಿಎಂ) ಕುರಿತು ಚರ್ಚಿಸಲು ಎನ್ ಪಿಸಿ ಮುಖ್ಯಸ್ಥ ಶರದ್ ಪವಾರ್ ಗುರುವಾರ ವಿರೋಧ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ. ಸಂಜೆ ಪವಾರ್ ಅವರ ನಿವಾಸದಲ್ಲಿ ಸಭೆ ನಡೆಯಲಿದೆ.

ಗ್ರಾಮೀಣ ವಿದ್ಯುನ್ಮಾನ ಮತಯಂತ್ರ (ಇವಿಎಂ) ಪರಿಣಾಮಕಾರಿತ್ವದ ಬಗ್ಗೆಅನುಮಾನ ಹೊಂದಿರುವ ಎಲ್ಲಾ ರಾಜಕೀಯ ಪಕ್ಷಗಳ ಸಭೆ ಕರೆದಿರುವುದಾಗಿ ಅವರು ವಿಪಕ್ಷಗಳ ನಾಯಕರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ. 

ಎಲ್ಲಾ ವಿರೋಧ ಪಕ್ಷದ ನಾಯಕರಿಗೆ ಬರೆದ ಪತ್ರದಲ್ಲಿ, ಎನ್‌ಸಿಪಿ ಮುಖ್ಯಸ್ಥರು ಪ್ರಸ್ತಾಪಿಸಿದ್ದಾರೆ ಎಂದು ಹೇಳಿದರು. ಕೆಲವು ನಾಗರಿಕ ಸಮಾಜದ ಕಾರ್ಯಕರ್ತರು ಮತ್ತು ರಾಜಕೀಯ ಪಕ್ಷಗಳು ಎತ್ತಿರುವ ಸಂದೇಹಗಳಿಗೆ ಉತ್ತರಿಸುವುದಾಗಿ ಮುಖ್ಯ ಚುನಾವಣಾ ಆಯುಕ್ತರು ಭರವಸೆ ನೀಡಿದ ನಂತರ ಈ ಬೆಳವಣಿಗೆಯಾಗಿದೆ.  

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಹಿತದೃಷ್ಟಿ ಮತ್ತು ಖ್ಯಾತ ಐಟಿ ವೃತ್ತಿಪರರು ಮತ್ತು ಕ್ರಿಪ್ಟೋಗ್ರಾಫರ್‌ಗಳು ವ್ಯಕ್ತಪಡಿಸಿದ ಅಭಿಪ್ರಾಯಗಳನ್ನು ಆಲಿಸಲು ಸಭೆಯನ್ನು ಕರೆಯಲಾಗಿದೆ ಎಂದು ಪವಾರ್ ಹೇಳಿದ್ದಾರೆ.

ಸಿಸಿಇ ವರದಿಯಲ್ಲಿ ಕೆಲವು ಸೂಕ್ತ ಪ್ರಶ್ನೆಗಳನ್ನು ಎತ್ತಿದ್ದು,  ಖ್ಯಾತ ಮಾಹಿತಿ ತಂತ್ರಜ್ಞಾನ ಪ್ರಾಧ್ಯಾಪಕರು, ಕ್ರಿಪ್ಟೋಗ್ರಾಫರ್‌ಗಳು ಮತ್ತು ನಿವೃತ್ತ ಸರ್ಕಾರಿ ಅಧಿಕಾರಿಗಳ ಅಭಿಪ್ರಾಯಗಳನ್ನು ವರದಿ ಒಳಗೊಂಡಿದೆ. ಮೇ 2022ರಲ್ಲಿ ನಾಗರಿಕ ಸಮಾಜವು ಭಾರತೀಯ ಚುನಾವಣಾ ಆಯೋಗಕ್ಕೆ ಪತ್ರ ಸಲ್ಲಿಸಿದ್ದು, ಎರಡು ವಾರಗಳ ನಂತರ ಮತ್ತೊಂದು ಜ್ಞಾಪನೆಯ ಪತ್ರ ಸಲ್ಲಿಸಿದೆ.

ಇಸಿಐ ಅವರ ಪತ್ರವನ್ನು ಅಂಗೀಕರಿಸಿದೆ. ಇವಿಎಂ  ದುರ್ಬಳಕೆ ಮಾಡುವ ಸಾಧ್ಯತೆಯ ಬಗ್ಗೆ ಈಗ ಸಾಮಾನ್ಯ ಜನರಲ್ಲೂ ಅನುಮಾನಗಳು ಮೂಡುತ್ತಿವೆ ಎಂದು ಪವಾರ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT