ಸಾಂದರ್ಭಿಕ ಚಿತ್ರ 
ದೇಶ

ತಮಿಳುನಾಡು ವಿಧಾನಸಭೆಯಲ್ಲಿ ಮತ್ತೊಮ್ಮೆ ಆನ್‌ಲೈನ್ ಜೂಜಾಟ ನಿಷೇಧ ಮಸೂದೆ ಅಂಗೀಕಾರ

ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಅವರು ಆನ್‌ಲೈನ್ ಜೂಜಾಟ ನಿಷೇಧ ಮಸೂದೆಯನ್ನು ಮರುಪರಿಶೀಲನೆಗಾಗಿ ಸರ್ಕಾರಕ್ಕೆ ಹಿಂದಿರುಗಿಸಿದ ಕೆಲವು ವಾರಗಳ ನಂತರ ತಮಿಳುನಾಡು ಸರ್ಕಾರ ಗುರುವಾರ ಮತ್ತೊಮ್ಮೆ ವಿಧಾನಸಭೆಯಲ್ಲಿ...

ಚೆನ್ನೈ: ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ಅವರು ಆನ್‌ಲೈನ್ ಜೂಜಾಟ ನಿಷೇಧ ಮಸೂದೆಯನ್ನು ಮರುಪರಿಶೀಲನೆಗಾಗಿ ಸರ್ಕಾರಕ್ಕೆ ಹಿಂದಿರುಗಿಸಿದ ಕೆಲವು ವಾರಗಳ ನಂತರ ತಮಿಳುನಾಡು ಸರ್ಕಾರ ಗುರುವಾರ ಮತ್ತೊಮ್ಮೆ ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಿದೆ.

ರಾಜ್ಯಪಾಲರು ಹಿಂದಿರುಗಿಸಿದ ನಂತರ ರಾಜ್ಯ ವಿಧಾನಸಭೆಯು ಮರು ಅಂಗೀಕರಿಸಿದ ಎರಡನೇ ಮಸೂದೆ ಇದಾಗಿದೆ. ಇದಕ್ಕೂ ಮುನ್ನ ತಮಿಳುನಾಡಿನಲ್ಲಿ ಪದವಿಪೂರ್ವ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(NEET) ಅನ್ನು ರದ್ದುಗೊಳಿಸುವ ಮಸೂದೆಯನ್ನು ಫೆಬ್ರವರಿ 8 ರಂದು ಮತ್ತೊಮ್ಮೆ ಅಂಗೀಕರಿಸಲಾಗಿತ್ತು.

ಇಂದು ಆನ್‌ಲೈನ್ ಜೂಜಾಟ ನಿಷೇಧ ಮತ್ತು ಆನ್‌ಲೈನ್ ಗೇಮ್ಸ್ ನಿಯಂತ್ರಣ ಮಸೂದೆ 2022 ಅನ್ನು ವಿಧಾನಸಭೆಯಲ್ಲಿ ಮಂಡಿಸಿ ಮಾತನಾಡಿದ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು, ಆನ್‌ಲೈನ್ ಜೂಜಾಟದಿಂದ 41 ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.

ಜೂಜಾಟದಿಂದ ಸಾವಿಗೆ ಶರಣಾದ ಚೆನ್ನೈನ ಸುರೇಶ್‌ಕುಮಾರ್ ಅವರು, ಆನ್‌ಲೈನ್ ರಮ್ಮಿಯನ್ನು ತಕ್ಷಣವೇ ನಿಷೇಧಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದರು ಮತ್ತು ಯಾರೂ ಸಹ ತನ್ನಂತೆ ಆತ್ಮಹತ್ಯೆ ಮಾಡಿಕೊಳ್ಳಬಾರದು. ಆನ್‌ಲೈನ್ ಜೂಜಾಟದಿಂದ ತಮ್ಮ ಸಾವೇ ಕೊನೆಯಾಗಲಿ ಎಂದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ