ದೇಶ

ಲೋಕಸಭೆಯಲ್ಲಿ ರಾಹುಲ್ ಭಾಗಿ, ಉಭಯ ಸದನಗಳ ಕಲಾಪ ಮುಂದೂಡಿಕೆ

Nagaraja AB

ನವದೆಹಲಿ: 2019ರ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯಿಂದ ದೋಷಿ ಎಂದು ಸಾಬೀತಾದ ನಂತರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ ಲೋಕಸಭೆ ಅಧಿವೇಶನದಲ್ಲಿ ಭಾಗವಹಿಸಿದರು. ಆದರೆ, ಅವರು ಮಾತನಾಡಲು ಸ್ಪೀಕರ್ ಓಂ ಬಿರ್ಲಾ  ಅವಕಾಶ ನೀಡಲಿಲ್ಲ.

ಸದನದ ಬಾವಿಗಿಳಿದು ಪ್ರತಿಪಕ್ಷಗಳ ಪ್ರತಿಭಟನೆಯಿಂದಾಗಿ ಕಲಾಪವನ್ನು ಮಧ್ಯಾಹ್ನ 12ಕ್ಕೆ ಮುಂದೂಡಲಾಯಿತು. ಸೋನಿಯಾ ಗಾಂಧಿ ಕೂಡಾ ಕಲಾಪದಲ್ಲಿ ಭಾಗಿಯಾದರು.  ತದನಂತರ ರಾಹುಲ್ ಗಾಂಧಿ ಲೋಕಸಭೆಯಿಂದ ನಿರ್ಗಮಿಸಿದರು.

ಅತ್ತ ರಾಜ್ಯಸಭೆಯಲ್ಲಿಯೂ  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪ್ರಜಾಪ್ರಭುತ್ವ ಹೇಳಿಕೆ ಮತ್ತು ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ತನಿಖೆಗೆ ಬೇಡಿಕೆಯ ಕುರಿತು ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷದ ಸದಸ್ಯರ ಘೋಷಣೆಗಳ ನಡುವೆ ರಾಜ್ಯಸಭೆಯ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೂ ಮುಂದೂಡಲಾಯಿತು.

ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷಗಳ ಸದಸ್ಯರಿಂದ ಸುಗಮ ಕಲಾಪ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ ಸಭಾಪತಿ ಜಗದೀಪ್ ಧನಕರ್ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು. 

SCROLL FOR NEXT