ದೇಶ

ರಾಹುಲ್ ಗಾಂಧಿ ಅನರ್ಹತೆ ಖಂಡಿಸಿದ ಮಮತಾ ಬ್ಯಾನರ್ಜಿ

Lingaraj Badiger

ಕೋಲ್ಕತಾ: ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಖಂಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಮಮತಾ ಬ್ಯಾನರ್ಜಿ ಅವರು, ಸಾಂವಿಧಾನಿಕ ಪ್ರಜಾಪ್ರಭುತ್ವದ ಹೊಸ ಕುಸಿತಕ್ಕೆ ದೇಶ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಹೊಸ ಭಾರತದಲ್ಲಿ ವಿರೋಧ ಪಕ್ಷದ ನಾಯಕರು ಬಿಜೆಪಿಯ ಪ್ರಮುಖ ಟಾರ್ಗೆಟ್ ಆಗಿದ್ದಾರೆ. ಕ್ರಿಮಿನಲ್ ಹಿನ್ನೆಲೆ ಹೊಂದಿರುವ ಬಿಜೆಪಿ ನಾಯಕರನ್ನು ಕ್ಯಾಬಿನೆಟ್‌ಗೆ ಸೇರಿಸಿಕೊಂಡರೆ, ವಿರೋಧ ಪಕ್ಷದ ನಾಯಕರನ್ನು ಅವರ ಭಾಷಣಕ್ಕಾಗಿ ಅನರ್ಹಗೊಳಿಸಲಾಗಿದೆ" ಎಂದು ಟಿಎಂಸಿ ಮುಖ್ಯಸ್ಥೆ ಟ್ವೀಟ್ ಮಾಡಿದ್ದಾರೆ.

ಗುರುವಾರ, ಸೂರತ್‌ನ ನ್ಯಾಯಾಲಯ, ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭಾ ಕಾರ್ಯದರ್ಶಿ ಉತ್ಪಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.

SCROLL FOR NEXT