ಸಂಗ್ರಹ ಚಿತ್ರ 
ದೇಶ

ದೇಶದಲ್ಲಿ 146 ದಿನಗಳ ನಂತರ 1,500ಕ್ಕೂ ಹೆಚ್ಚು ಕೋವಿಡ್‌ ಸೋಂಕಿತರು ಪತ್ತೆ

ದೇಶದಲ್ಲಿ 146 ದಿನಗಳ ಬಳಿಕ 1,500ಕ್ಕೂ ಹೆಚ್ಚು ಹೊಸ ಕೋವಿಡ್​-19 ಪ್ರಕರಣಗಳು ದಾಖಲಾಗಿವೆ.

ನವದೆಹಲಿ: ದೇಶದಲ್ಲಿ 146 ದಿನಗಳ ಬಳಿಕ 1,500ಕ್ಕೂ ಹೆಚ್ಚು ಹೊಸ ಕೋವಿಡ್​-19 ಪ್ರಕರಣಗಳು ದಾಖಲಾಗಿವೆ.

ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,590 ಹೊಸ ಪ್ರಕರಣಗಳು ವರದಿಯಾಗಿದ್ದು, 6 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,47,02,257ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,30,824ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 8,601ಕ್ಕೆ ತಲುಪಿದೆ. ಈ ನಡುವೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,41,62,832ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 1,19,560 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ  92,08,62,639 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.  

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 220,65,44,324 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT