ದೇಶ

ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡ ಕರಾವಳಿ ರಕ್ಷಣಾ ಪಡೆಯ ಹೆಲಿಕಾಪ್ಟರ್, ಓರ್ವ ವ್ಯಕ್ತಿಗೆ ಗಾಯ

Ramyashree GN

ಕೊಚ್ಚಿ: ಇಲ್ಲಿನ ಕೊಚ್ಚಿನ್ ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನಲ್ಲಿ (ಸಿಐಎಎಲ್) ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಭಾನುವಾರ ಪತನಗೊಂಡಿದ್ದು, ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ.

ತರಬೇತಿ ನಿರತವಾಗಿದ್ದ ಹೆಲಿಕಾಪ್ಟರ್ ಮಧ್ಯಾಹ್ನ 12.55ಕ್ಕೆ ಹೆಲಿಪ್ಯಾಡ್‌ನಿಂದ ಟೇಕಾಫ್ ಆಗುತ್ತಿದ್ದಂತೆ ಪತನಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಪ್ರಾಥಮಿಕ ವರದಿಗಳ ಪ್ರಕಾರ, ಒಬ್ಬ ವ್ಯಕ್ತಿಗೆ ಕೈಯಲ್ಲಿ ಸಣ್ಣ ಗಾಯವಾಗಿದೆ ಎಂದು ಮೂಲಗಳು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿವೆ.
ಈಮಧ್ಯೆ, ಕೋಸ್ಟ್ ಗಾರ್ಡ್‌ನ ಸುಧಾರಿತ ಲಘು ಹೆಲಿಕಾಪ್ಟರ್ ಅಪಘಾತಕ್ಕೀಡಾದ ನಂತರ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಎರಡು ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿದೆ ಎಂದು ಸಿಐಎಎಲ್ ತಿಳಿಸಿದೆ.

ಎಎಲ್ಎಚ್ ಅನ್ನು ಕಾರ್ಯಾಚರಣೆಯ ಪ್ರದೇಶದಿಂದ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ತೆರವುಗೊಳಿಸಲಾಗಿದೆ ಮತ್ತು ಸುರಕ್ಷತಾ ತಪಾಸಣೆಯ ನಂತರ ರನ್‌ವೇಯನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಬಳಿಕ ವಿಮಾನ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗಿದೆ ಎಂದು ಸಿಐಎಎಲ್ ಹೇಳಿಕೆಯಲ್ಲಿ ತಿಳಿಸಿದೆ.

ಕೋಸ್ಟ್ ಗಾರ್ಡ್ ಎನ್‌ಕ್ಲೇವ್ ಸಿಐಎಎಲ್ ಸಂಕೀರ್ಣದ ಒಳಗಿದೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

SCROLL FOR NEXT