2018ರಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಮೃತಪಟ್ಟ ವ್ಯಕ್ತಿಯ ಪತ್ನಿಯನ್ನು ಸಂತೈಸುತ್ತಿರುವ ಯುಡಿಪಿ ನಾಯಕರ ಸಾಂದರ್ಭಿಕ ಚಿತ್ರ 
ದೇಶ

ಕೇರಳ: ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ಸಾವು; ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ!

ರಸ್ತೆ ತಪಾಸಣೆ ವೇಳೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರೊಬ್ಬರು ಹೆಲ್ಮೆಟ್‌ನಿಂದ ಹೊಡೆದಿದ್ದರಿಂದ  ಇಬ್ಬರು ಮಕ್ಕಳ ತಂದೆಯೊಬ್ಬರು ಶನಿವಾರ ರಾತ್ರಿ ತ್ರಿಪುಣಿತುರಾ ಹಿಲ್ ಪ್ಯಾಲೇಸ್ ಠಾಣೆಯಲ್ಲಿ ಸಾವನ್ನಪ್ಪಿದ್ದಾರೆ. ಇದು ಕೇರಳ ರಾಜ್ಯವನ್ನು ಬೆಚ್ಚಿ ಬೀಳಿಸಿದೆ.  ಮೃತ ವ್ಯಕ್ತಿಯನ್ನು ಇರುಪನಂ ಮೂಲದ ಮನೋಹರನ್ ಎಂದು ಗುರುತಿಸಲಾಗಿದೆ.

ಕೊಚ್ಚಿ: ರಸ್ತೆ ತಪಾಸಣೆ ವೇಳೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರೊಬ್ಬರು ಹೆಲ್ಮೆಟ್‌ನಿಂದ ಹೊಡೆದಿದ್ದರಿಂದ  ಇಬ್ಬರು ಮಕ್ಕಳ ತಂದೆಯೊಬ್ಬರು ಶನಿವಾರ ರಾತ್ರಿ ತ್ರಿಪುಣಿತುರಾ ಹಿಲ್ ಪ್ಯಾಲೇಸ್ ಠಾಣೆಯಲ್ಲಿ ಸಾವನ್ನಪ್ಪಿದ್ದಾರೆ. ಇದು ಕೇರಳ ರಾಜ್ಯವನ್ನು ಬೆಚ್ಚಿ ಬೀಳಿಸಿದೆ.  ಮೃತ ವ್ಯಕ್ತಿಯನ್ನು ಇರುಪನಂ ಮೂಲದ ಮನೋಹರನ್ ಎಂದು ಗುರುತಿಸಲಾಗಿದೆ.

ಕುಟುಂಬಕ್ಕೆ ಏಕೈಕ ಜೀವನಾಧಾರವಾಗಿದ್ದ ಅವರನ್ನು ಪೊಲೀಸ್ ಠಾಣೆಗೆ ಎಳೆದೊಯ್ದ ಒಂದು ಗಂಟೆಯೊಳಗೆ ಎರ್ನಾಕುಲಂ ಮೆಡಿಕಲ್ ಟ್ರಸ್ಟ್‌ನಲ್ಲಿ ಮೃತಪಟ್ಟಿರುವುದಾಗಿ ಪ್ರಕಟಿಸಲಾಗಿದೆ. ಸಣ್ಣ ಬಿಡಿ ಭಾಗಗಳ ಅಂಗಡಿ ನಡೆಸುತ್ತಿದ್ದ ಮನೋಹರನ್ ಕುಡಿದು ಅಜಾಗರೂಕತೆಯಿಂದ ವಾಹನ ಚಲಾಯಿಸದಿದ್ದರೂ ಅವರನ್ನು ಠಾಣೆಗೆ ಎಳೆದೊಯ್ಯಲಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ತಪಾಸಣೆಯ ವೇಳೆ ಮನೋಹರನ್ ಅವರ ಮುಖಕ್ಕೆ ಕಪಾಳಮೋಕ್ಷ ಮಾಡಿದ ಸಬ್ ಇನ್ಸ್‌ಪೆಕ್ಟರ್ ಜಿಮ್ಮಿ ಜೋಸ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಸಬ್ ಇನ್ಸ್ ಪೆಕ್ಟರ್ ಅವರ ಅನುಚಿತ ವರ್ತನೆ ಒಪ್ಪತಕ್ಕದ್ದಲ್ಲ ಎಂದಿರುವ  ಕೊಚ್ಚಿ ನಗರ ಪೊಲೀಸ್ ಕಮಿಷನರ್ ಕೆ ಸೇತು ರಾಮನ್ , ಮನೋಹರನ್ ಕುಡಿದು ವಾಹನ ಚಲಾಯಿಸಿದ್ದು ಕಂಡುಬಂದಿಲ್ಲ. ಘಟನೆಯ ತನಿಖೆಯನ್ನು ನಗರ ಅಪರಾಧ ವಿಭಾಗದ ಡಿವೈಎಸ್ಪಿಗೆ ವಹಿಸಲಾಗಿದೆ. ಸಾವಿನ ಹಿಂದಿರುವ ನಿಜವಾದ ಕಾರಣ ಮರಣೋತ್ತರ ಪರೀಕ್ಷೆಯ ವರದಿಯಿಂದ ತಿಳಿದುಬರಲಿದೆ ಎಂದು ಅವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು.

ಈ ಮಧ್ಯೆ ಕಸ್ಟಡಿ ಸಾವು ಪ್ರಕರಣ ರಾಜಕೀಯ ಸ್ವರೂಪ ಪಡೆದಿದ್ದು, ಹಿಲ್ ಪ್ಯಾಲೇಸ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್‌ನಿಂದ ದೌರ್ಜನ್ಯದ ಬಗ್ಗೆ ನನಗೆ ಆಗಾಗ್ಗೆ ದೂರುಗಳು ಬರುತ್ತವೆ ಎಂದು  ಸ್ಥಳೀಯ ಶಾಸಕ ಅನೂಪ್ ಜೇಕಬ್ ಹೇಳಿದ್ದಾರೆ. 

ಸಬ್ ಇನ್ಸ್ ಪೆಕ್ಟರ್ ಅವರನ್ನು ಕೇವಲ ಅಮಾನತು ಮಾಡಿದರೆ ಸಾಲದು, ಅವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು ಎಂದು ವಿಪಕ್ಷ ನಾಯಕ ವಿ.ಡಿ. ಸತೀಶನ್ ಆಗ್ರಹಿಸಿದ್ದಾರೆ.  ಕಾಂಗ್ರೆಸ್ ಮತ್ತು ಬಿಜೆಪಿ ಕೂಡ ಪೊಲೀಸ್ ಠಾಣೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದವು. ಪ್ರತಿಭಟನಾ ಮೆರವಣಿ ಹಿನ್ನೆಲೆಯಲ್ಲಿ ಯಾವುದೇ ಹಿಂಸಾಚಾರ ನಡೆಯದಂತೆ ಹಿಲ್ ಪ್ಯಾಲೇಸ್ ಪೊಲೀಸ್ ಠಾಣೆ ಎದುರು ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT