ದೇಶ

ರಾಹುಲ್ ಗಾಂಧಿ ಅನರ್ಹತೆ ವಿರುದ್ಧ ಕಾಂಗ್ರೆಸ್ ದೇಶದಾದ್ಯಂತ ಸತ್ಯಾಗ್ರಹ, ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು

Ramyashree GN

ನವದೆಹಲಿ: ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಭಾನುವಾರ ಎಲ್ಲಾ ರಾಜ್ಯಗಳು ಮತ್ತು ಜಿಲ್ಲಾ ಕೇಂದ್ರಗಳಲ್ಲಿನ ಗಾಂಧಿ ಪ್ರತಿಮೆಗಳ ಮುಂದೆ ಒಗ್ಗಟ್ಟಿನಿಂದ ಒಂದು ದಿನದ ಸತ್ಯಾಗ್ರಹವನ್ನು ಆಯೋಜಿಸಲಿದೆ.

ಸತ್ಯಾಗ್ರಹ ಬೆಳಗ್ಗೆ 10 ಗಂಟೆಗೆ ಆರಂಭವಾಗಿ ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ರಾಷ್ಟ್ರ ರಾಜಧಾನಿಯ ರಾಜ್ ಘಾಟ್‌ನಲ್ಲಿ ಸತ್ಯಾಗ್ರಹ ನಡೆಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಉದ್ಯಮಿ ಗೌತಮ್ ಅದಾನಿ ನಡುವಿನ ಸಂಬಂಧವನ್ನು ಸತತವಾಗಿ ಪ್ರಶ್ನಿಸಿದ್ದಕ್ಕೆ ಪ್ರತಿಕ್ರಿಯೆಯಾಗಿ ರಾಹುಲ್ ಗಾಂಧಿಯನ್ನು ದೋಷಿ ಎನ್ನಲಾಗಿದೆ ಮತ್ತು ಅನರ್ಹಗೊಳಿಸುವಿಕೆಯು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವಕ್ಕೆ ಗಂಭೀರ ಅಪಾಯವನ್ನುಂಟುಮಾಡಿದೆ ಎಂದು ಪಕ್ಷವು ಭಾವಿಸುತ್ತದೆ.

ರಾಹುಲ್ ಗಾಂಧಿ ಒಬ್ಬಂಟಿಯಲ್ಲ ಮತ್ತು ಲಕ್ಷಾಂತರ ಕಾಂಗ್ರೆಸ್ಸಿಗರು ಮತ್ತು ಜನರು ತಮ್ಮ ರಾಜಕೀಯ ಸಂಬಂಧವನ್ನು ಲೆಕ್ಕಿಸದೆ ಸತ್ಯ ಮತ್ತು ನ್ಯಾಯಕ್ಕಾಗಿ ಈ ಹೋರಾಟದಲ್ಲಿ ಅವರೊಂದಿಗೆ ಸೇರಿಕೊಳ್ಳುತ್ತಾರೆ ಎಂದು ಕಾಂಗ್ರೆಸ್ ಹೇಳಿದೆ.

ಈ ನಿಟ್ಟಿನಲ್ಲಿ ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಗಳು ಭಾನುವಾರ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಎಲ್ಲಾ ರಾಜ್ಯ ಮತ್ತು ಜಿಲ್ಲಾ ಕೇಂದ್ರಗಳಲ್ಲಿನ ಗಾಂಧಿ ಪ್ರತಿಮೆಗಳ ಮುಂದೆ ಒಂದು ದಿನದ ಸತ್ಯಾಗ್ರಹವನ್ನು ಆಯೋಜಿಸಲು ತಿಳಿಸಲಾಗಿದೆ.

ಮುಖ್ಯಮಂತ್ರಿಗಳಾದ ಅಶೋಕ್ ಗೆಹ್ಲೋಟ್ ಮತ್ತು ಭೂಪೇಶ್ ಬಘೇಲ್ ಅವರೊಂದಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ಜೈರಾಮ್ ರಮೇಶ್ ಅವರೊಂದಿಗೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಸೇರಿದ್ದಾರೆ.

ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು

ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ರಾಜ್‌ಘಾಟ್‌ನಲ್ಲಿ ಸತ್ಯಾಗ್ರಹ ನಡೆಸಲು ಕಾಂಗ್ರೆಸ್‌ಗೆ ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಮತ್ತು ಸಂಚಾರ ಕಾರಣಗಳಿಂದಾಗಿ ಪಕ್ಷದ ಮನವಿಯನ್ನು ತಿರಸ್ಕರಿಸಲಾಗಿದೆ. ರಾಜ್‌ಘಾಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆಕ್ಷನ್ 144 ಸಿಆರ್‌ಪಿಸಿ ಅಡಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ದೆಹಲಿ ಪೊಲೀಸರು ಪತ್ರದಲ್ಲಿ ತಿಳಿಸಿದ್ದಾರೆ.

ಸತ್ಯಾಗ್ರಹ ನಡೆಸಲು ಅನುಮತಿ ನಿರಾಕರಿಸಲಾಗಿದ್ದು, ಸಾಕಷ್ಟು ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

2019ರ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್‌ನ ಸೂರತ್‌ ನ್ಯಾಯಾಲಯವು ಅವರನ್ನು ದೋಷಿ ಎಂದು ಘೋಷಿಸಿದ ಒಂದು ದಿನದ ನಂತರ ಶುಕ್ರವಾರ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಲಾಯಿತು.

ಈ ಅನರ್ಹತೆಯು ನಾಲ್ಕು ಬಾರಿ ಸಂಸದರಾಗಿರುವ ರಾಹುಲ್ ಗಾಂಧಿ (52) ಅವರ ಶಿಕ್ಷೆಯನ್ನು ಉನ್ನತ ನ್ಯಾಯಾಲಯವು ತಡೆಹಿಡಿಯದಿದ್ದರೆ ಎಂಟು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ನಿರ್ಬಂಧಿಸುತ್ತದೆ.

SCROLL FOR NEXT