ಸುಪ್ರೀಂ ಕೋರ್ಟ್ 
ದೇಶ

ಅಪರಾಧಿಗಳ ಬಿಡುಗಡೆ ವಿರುದ್ಧ ಬಿಲ್ಕಿಸ್ ಬಾನು ಅರ್ಜಿ; ಕೇಂದ್ರ, ಗುಜರಾತ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ

2002ರ ಗೋಧ್ರಾ ನಂತರದ ಗಲಭೆಯಲ್ಲಿ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಮನವಿ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರ, ಗುಜರಾತ್ ಸರ್ಕಾರ ಮತ್ತು ಇತರರಿಂದ ಪ್ರತಿಕ್ರಿಯೆ ಕೇಳಿದೆ.

ನವದೆಹಲಿ: 2002ರ ಗೋಧ್ರಾ ನಂತರದ ಗಲಭೆಯಲ್ಲಿ ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಮನವಿ ಕುರಿತು ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರ, ಗುಜರಾತ್ ಸರ್ಕಾರ ಮತ್ತು ಇತರರಿಂದ ಪ್ರತಿಕ್ರಿಯೆ ಕೇಳಿದೆ.

ಈ ಪ್ರಕರಣದಲ್ಲಿ ಗುಜರಾತ್ ಸರ್ಕಾರವು ನೀಡಿರುವ 11 ಅಪರಾಧಿಗಳ ಶಿಕ್ಷೆಯ ವಿನಾಯತಿಯನ್ನು ಬಾನು ಪ್ರಶ್ನಿಸಿದ್ದಾರೆ.

ಏಪ್ರಿಲ್ 18 ರಂದು ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರನ್ನೊಳಗೊಂಡ ಪೀಠವು, ಇದು ಸಮಸ್ಯೆಗಳ ಹರವುಗಳನ್ನು ಒಳಗೊಂಡಿದೆ ಮತ್ತು ಅದನ್ನು ವಿವರವಾಗಿ ಆಲಿಸುವ ಅಗತ್ಯವಿದೆ ಎಂದು ಹೇಳಿದರು.

ಸುಪ್ರೀಂ ಕೋರ್ಟ್ ಕೇಂದ್ರ, ಗುಜರಾತ್ ಸರ್ಕಾರ ಮತ್ತು ಅಪರಾಧಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಮುಂದಿನ ವಿಚಾರಣೆಯ ದಿನಾಂಕದಂದು ಅಪರಾಧಿಗಳಿಗೆ ಶಿಕ್ಷೆಯಿಂದ ವಿನಾಯತಿ ನೀಡಿರುವ ಸಂಬಂಧಿತ ಕಡತಗಳೊಂದಿಗೆ ಸಿದ್ಧವಾಗುವಂತೆ ಗುಜರಾತ್ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಿದೆ.

ವಿಚಾರಣೆಯ ಸಂದರ್ಭದಲ್ಲಿ, ಪೀಠವು ಪ್ರಕರಣದಲ್ಲಿ ಭಾವನೆಗಳಿಂದ ಮುಳುಗುವುದಿಲ್ಲ ಮತ್ತು ಕಾನೂನಿನ ಮೂಲಕ ಮಾತ್ರ ಹೋಗುತ್ತದೆ ಎಂದು ಹೇಳಿತು.

ಜನವರಿ 4 ರಂದು, ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಬೇಲಾ ಎಂ ತ್ರಿವೇದಿ ಅವರನ್ನೊಳಗೊಂಡ ಪೀಠವು, ಬಿಲ್ಕಿಸ್ ಬಾನು ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳನ್ನು ಕೈಗೆತ್ತಿಕೊಂಡಿತು. ಆದರೆ, ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರು ಯಾವುದೇ ಕಾರಣ ನೀಡದೆ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದರು.

ಗುಜರಾತ್ ಸರ್ಕಾರವು ಪ್ರಕರಣದ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆಯನ್ನು ಪ್ರಶ್ನಿಸಿ ಬಿಲ್ಕಿಸ್ ಬಾನು ಅವರು ಕಳೆದ ನವೆಂಬರ್ 30 ರಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅಪರಾಧಿಗಳ ಬಿಡುಗಡೆಯು ಸಮಾಜದ ಆತ್ಮಸಾಕ್ಷಿಯನ್ನು ಅಲ್ಲಾಡಿಸಿದೆ ಎಂದು ಹೇಳಿದ್ದರು.

ಆರೋಪ ಸಾಬೀತಾಗಿ 11 ಅಪರಾಧಿಗಳು 15ಕ್ಕೂ ಹೆಚ್ಚು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದರು. ಗುಜರಾತ್ ಸರ್ಕಾರ ಸನ್ನಡತೆ ಆಧಾರದಲ್ಲಿ ಕೈದಿಗಳ ಬಿಡುಗಡೆಗೆ ಅನುಮತಿ ನೀಡಿತ್ತು. ಹೀಗಾಗಿ ಆಗಸ್ಟ್ 15ರಂದು ಅವರೆಲ್ಲರೂ ಗೋಧ್ರಾ ಉಪ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್