ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ರಾಹುಲ್ ಅನರ್ಹತೆ: ಜರ್ಮನಿಗೆ ಧನ್ಯವಾದ ತಿಳಿಸಿದ ದಿಗ್ವಿಜಯ್ ಸಿಂಗ್; ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಕಾಂಗ್ರೆಸ್ ಪಕ್ಷ

ರಾಹುಲ್ ಗಾಂಧಿ ಅನರ್ಹತೆ ವಿಚಾರವನ್ನು ಜರ್ಮನಿ ಗಮನಿಸಿದೆ ಎಂಬ ದಿಗ್ವಿಜಯ್ ಸಿಂಗ್ ಹೇಳಿಕೆ, ಟ್ವೀಟ್ ನಿಂದ ಕಾಂಗ್ರೆಸ್ ಪಕ್ಷ ಅಂತರ ಕಾಯ್ದುಕೊಂಡಿದೆ.

ದಿಗ್ವಿಜಯ್ ಸಿಂಗ್
Srinivas Rao BV
Updated On : 31 Mar 2023, 2:04 pm

ನವದೆಹಲಿ: ರಾಹುಲ್ ಗಾಂಧಿ ಅನರ್ಹತೆ ವಿಚಾರವನ್ನು ಜರ್ಮನಿ ಗಮನಿಸಿದೆ ಎಂಬ ದಿಗ್ವಿಜಯ್ ಸಿಂಗ್ ಹೇಳಿಕೆ, ಟ್ವೀಟ್ ನಿಂದ ಕಾಂಗ್ರೆಸ್ ಪಕ್ಷ ಅಂತರ ಕಾಯ್ದುಕೊಂಡಿದೆ. 

ಭಾರತದ ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳು ಅದರೆಡೆಗೆ ಒಡ್ಡಿದ ಬೆದರಿಕೆ, ಅಪಾಯಗಳನ್ನು  ಸ್ವತಃ ಎದುರಿಸಬೇಕಾಗುತ್ತದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ದಿಗ್ವಿಜಯ್ ಸಿಂಗ್ ಅವರ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ.

ರಾಹುಲ್ ಗಾಂಧಿಗೆ ಕಿರುಕುಳ ನೀಡುವ ಮೂಲಕ ಭಾರತದಲ್ಲಿ ಪ್ರಜಾಪ್ರಭುತ್ವದ ವಿಷಯದಲ್ಲಿ ಹೇಗೆ ರಾಜಿಮಾಡಿಕೊಳ್ಳಲಾಗುತ್ತಿದೆ ಎಂಬುದನ್ನು ಗಮನಿಸಿದ ಜರ್ಮನಿಯ ವಿದೇಶಾಂಗ ಸಚಿವಾಲಯ ಹಾಗೂ ಡಾಯ್ಚ ವೆಲ್ಲೆಯ ಮುಖ್ಯ ಅಂತಾರಾಷ್ಟ್ರೀಯ ಸಂಪಾದಕ ರಿಚರ್ಡ್ ವಾಕರ್ ಗೆ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಟ್ವೀಟ್ ಮೂಲಕ ಧನ್ಯವಾದ ತಿಳಿಸಿದ್ದರು.

Advertisement

Advertisement

ಇದನ್ನೂ ಓದಿ: ರಾಹುಲ್ ಗಾಂಧಿ ಅನರ್ಹತೆಯ ವಿಷಯ ಗಮನಿಸಿದ ಜರ್ಮನಿ: ಕಾಂಗ್ರೆಸ್-ಬಿಜೆಪಿ ನಡುವೆ ವಾಕ್ಸಮರ

ಬಿಜೆಪಿ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ಭಾರತದ ಆಂತರಿಕ ವಿಷಯಗಳಿಗೆ ಪ್ರವೇಶಿಸುವುದಕ್ಕೆ ಕಾಂಗ್ರೆಸ್ ವಿದೇಶದ ಶಕ್ತಿಗಳಿಗೆ ಆಹ್ವಾನ ನೀಡುತ್ತಿದೆ ಎಂಬ ಗಂಭೀರ ಆರೋಪ ಮಾಡಿತ್ತು. ಈ ಬೆನ್ನಲ್ಲೇ ಕಾಂಗ್ರೆಸ್ ದಿಗ್ವಿಜಯ್ ಸಿಂಗ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments