ಸಾಂದರ್ಭಿಕ ಚಿತ್ರ 
ದೇಶ

ತಮಿಳುನಾಡು: ಹಿಜಾಬ್ ತೆಗೆಯುವಂತೆ ಮಹಿಳೆಗೆ ಒತ್ತಾಯ, ಆರು ಮಂದಿ ಬಂಧನ

ಈ ವಾರದ ಆರಂಭದಲ್ಲಿ ಐತಿಹಾಸಿಕ ವೆಲ್ಲೂರು ಕೋಟೆಗೆ ಭೇಟಿ ನೀಡುತ್ತಿದ್ದ ಮಹಿಳೆಯೊಬ್ಬಳ ಹಿಜಾಬ್ ತೆಗೆಯುವಂತೆ ಒತ್ತಾಯಿಸಿ ಅದನ್ನು ವಿಡಿಯೋ ಮಾಡಿದ ಆರು ಮಂದಿಯನ್ನು ತಮಿಳುನಾಡಿನ ವೆಲ್ಲೂರಿನಲ್ಲಿ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಗುರುವಾರ ತಿಳಿಸಿದ್ದಾರೆ.

ವೆಲ್ಲೂರು: ಈ ವಾರದ ಆರಂಭದಲ್ಲಿ ಐತಿಹಾಸಿಕ ವೆಲ್ಲೂರು ಕೋಟೆಗೆ ಭೇಟಿ ನೀಡುತ್ತಿದ್ದ ಮಹಿಳೆಯೊಬ್ಬಳ ಹಿಜಾಬ್ ತೆಗೆಯುವಂತೆ ಒತ್ತಾಯಿಸಿ ಅದನ್ನು ವಿಡಿಯೋ ಮಾಡಿದ ಆರು ಮಂದಿಯನ್ನು ತಮಿಳುನಾಡಿನ ವೆಲ್ಲೂರಿನಲ್ಲಿ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಗುರುವಾರ ತಿಳಿಸಿದ್ದಾರೆ.

ಬಲವಂತವಾಗಿ ಹಿಜಾಬ್ ತೆಗೆಯುವಂತೆ ಮಹಿಳೆಯನ್ನು ಒತ್ತಾಯಿಸಿದ ಗ್ಯಾಂಗ್ ನಲ್ಲಿ 17 ವರ್ಷದ ಬಾಲ ಅಪರಾಧಿಯೊಬ್ಬ ಸೇರಿದ್ದು, ಆತನನ್ನು ಸರ್ಕಾರಿ ರಕ್ಷಣಾ ಗೃಹಕ್ಕೆ ಕಳುಹಿಸಲಾಗಿದೆ. ಉಳಿದವರನ್ನು ಪೊಲೀಸರು ಬಂಧಿಸಿದ್ದಾರೆ. ಇವರೆಲ್ಲರೂ ಬಹುತೇಕ ಆಟೋ ರಿಕ್ಷಾ ಚಾಲಕರಾಗಿದ್ದು, ಕೋಟೆಗೆ ಭೇಟಿ ನೀಡುತ್ತಿದ್ದ ಮೂವರು ಹಿಜಾಬ್ ಧರಿಸದ ಮಹಿಳೆಯರನ್ನು ಟಾರ್ಗೆಟ್ ಮಾಡಿದ್ದರು ಎಂದು ಅಧಿಕಾರಿ ಹೇಳಿದ್ದಾರೆ.

ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದ ವೆಲ್ಲೂರ್ ಪೊಲೀಸ್ ವರಿಷ್ಠಾಧಿಕಾರಿ ಎಸ್ ರಾಜೇಶ್ ಕಣ್ಣನ್, ಮಾರ್ಚ್ 27 ರಂದು ನಡೆದ ಅಪರಾಧದ ಹಿಂದಿನ ಉದ್ದೇಶವನ್ನು ತನಿಖೆ ಮಾಡಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ವಿಡಿಯೋಗಳನ್ನು ಶೇರ್ ಮಾಡದಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ ಎಂದರು. 

ಹಿಜಾಬ್ ಧರಿಸಿದ ಮಹಿಳೆಯನ್ನು ಹೊರಗೆ ಕರೆದೊಯ್ಯುವುದು ನ್ಯಾಯವೇ ಎಂದು  ಮಹಿಳೆಯ ಸ್ನೇಹಿತೆಯನ್ನು ದುಷ್ಕರ್ಮಿಗಳು ಕೇಳುತ್ತಿರುವುದು ವಿಡಿಯೋದಲ್ಲಿದೆ. ಈ ಘಟನೆಯ ನಂತರ 16ನೇ ಶತಮಾನದ ಐತಿಹಾಸಿಕ ಕೋಟೆಯಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಪೊಲೀಸ್ ನೆರವಿನ ಬೂತ್ ನ್ನು ಶಾಶ್ವತಗೊಳಿಸಲಾಗುವುದು. ಸಾರ್ವಜನಿಕರ ಅನುಕೂಲಕ್ಕಾಗಿ ಬೂತ್‌ನಲ್ಲಿ ಪೊಲೀಸ್ ಅಧಿಕಾರಿಗಳ ಫೋನ್ ಸಂಖ್ಯೆಗಳನ್ನು ಪ್ರಮುಖವಾಗಿ ಪ್ರದರ್ಶಿಸಲಾಗುತ್ತದೆ  ಎಂದು ಕಣ್ಣನ್ ಸುದ್ದಿಗಾರರಿಗೆ ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT