ದೇಶ

ಪಶ್ಚಿಮ ಬಂಗಾಳ: ಹಿಂಸಾರೂಪಕ್ಕೆ ತಿರುಗಿದ ರಾಮ ನವಮಿ ಆಚರಣೆ; ಹೌರಾ ಜಿಲ್ಲೆಯಲ್ಲಿ ಕಲ್ಲು ತೂರಾಟ, ಹಲವರಿಗೆ ಗಾಯ

Sumana Upadhyaya

ನವದೆಹಲಿ: ರಾಮನವಮಿಯಂದು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹಿಂಸಾಚಾರ ನಡೆದ ಕೇವಲ ಒಂದು ದಿನದ ನಂತರ ಹೌರಾದಲ್ಲಿ ಇಂದು ಶುಕ್ರವಾರ ಮತ್ತೊಂದು ಕಲ್ಲು ತೂರಾಟದ ಘಟನೆ ನಡೆದಿದೆ. 

ಶುಕ್ರವಾರ ಹೊಸ ಹಿಂಸಾಚಾರ ಭುಗಿಲೆದ್ದ ಹೌರಾದ ಶಿಬ್‌ಪುರ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯನ್ನು ಬಿಗಿ ಭದ್ರತೆಗೆ ನಿಯೋಜಿಸಲಾಗಿದೆ. ಹೌರಾ ಜಿಲ್ಲೆಯಲ್ಲಿ ನಿನ್ನೆ ಗುರುವಾರ ರಾಮನವಮಿ ಹಬ್ಬದ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ ನಂತರ ಹಿಂಸಾಚಾರ ಮತ್ತು ಬೆಂಕಿ ಹಚ್ಚಲಾಗಿದೆ, ನಂತರ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಪ್ರದೇಶದಲ್ಲಿ ಅಂಗಡಿಗಳನ್ನು ಧ್ವಂಸ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿಗಳ ಪ್ರಕಾರ, ಘಟನೆಯಲ್ಲಿ 10 ಜನರು ಗಾಯಗೊಂಡಿದ್ದು, 36 ಜನರನ್ನು ಬಂಧಿಸಲಾಗಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಅಪರಾಧಿಗಳನ್ನು ಸುಮ್ಮನೆ ಬಿಡುವುದಿಲ್ಲ ಕಾನೂನು ತನ್ನ ಹಾದಿಯನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ. ಹೌರಾದಲ್ಲಿ ರಾಮನವಮಿ ಹಿಂಸಾಚಾರವನ್ನು ಬಿಜೆಪಿ ನಡೆಸಿದೆ ಎಂದು ಅವರು ಆರೋಪಿಸಿದರು. ಆಸ್ತಿ ಧ್ವಂಸಗೊಂಡ ಎಲ್ಲರಿಗೂ ರಾಜ್ಯ ಸರ್ಕಾರ ಸಹಾಯ ಮಾಡುತ್ತದೆ ಎಂದು ಭರವಸೆ ನೀಡಿದರು.

ಕೋಮುಗಲಭೆ ಎಬ್ಬಿಸಲು ಬಿಜೆಪಿ ಬೇರೆ ರಾಜ್ಯಗಳಿಂದ ಗೂಂಡಾಗಳನ್ನು ನೇಮಿಸಿಕೊಂಡಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. 

ಮಾಹಿತಿಗಳ ಪ್ರಕಾರ, ರಾಮನವಮಿ ಹಬ್ಬದ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ 36 ಜನರನ್ನು ಬಂಧಿಸಲಾಗಿದ್ದು, 10 ಜನರು ಗಾಯಗೊಂಡಿದ್ದಾರೆ. ಈ ಪ್ರದೇಶದಲ್ಲಿ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಅಂಗಡಿಗಳನ್ನು ಧ್ವಂಸಗೊಳಿಸಲಾಗಿದೆ.

ಶಿಬ್ ಪುರನಲ್ಲಿ ಹಿಂಸಾಚಾರ: 'ರಾಮ ನವಮಿ'ಯಂದು ಬೆಂಕಿ ಹಚ್ಚಿದ ಒಂದು ದಿನದ ನಂತರ ಇಂದು ಹೊಸ ಹಿಂಸಾಚಾರ ಭುಗಿಲೆದ್ದಿರುವ ಹೌರಾದ ಶಿಬ್‌ಪುರ್ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ

SCROLL FOR NEXT