ಪ್ರಾತಿನಿಧಿಕ ಚಿತ್ರ 
ದೇಶ

ಸೊಳ್ಳೆ ಬತ್ತಿಯಿಂದ ಬೆಂಕಿ ಹೊತ್ತಿಕೊಂಡು ಒಂದೂವರೆ ವರ್ಷದ ಮಗು ಸೇರಿ ಆರು ಮಂದಿ ಸಾವು

ಈಶಾನ್ಯ ದೆಹಲಿಯ ಶಾಸ್ತ್ರಿ ಪಾರ್ಕ್‌ನಲ್ಲಿರುವ ಮನೆಯೊಂದರಲ್ಲಿ ಸೊಳ್ಳೆ ಕಾಯಿಲ್ ಉರುಳಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿದ್ದರಿಂದ ಉಸಿರುಗಟ್ಟಿ ಹಸುಗೂಸು ಸೇರಿದಂತೆ ಆರು ಜನರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ನವದೆಹಲಿ: ಈಶಾನ್ಯ ದೆಹಲಿಯ ಶಾಸ್ತ್ರಿ ಪಾರ್ಕ್‌ನಲ್ಲಿರುವ ಮನೆಯೊಂದರಲ್ಲಿ ಸೊಳ್ಳೆ ಕಾಯಿಲ್ ಉರುಳಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿದ್ದರಿಂದ ಉಸಿರುಗಟ್ಟಿ ಹಸುಗೂಸು ಸೇರಿದಂತೆ ಆರು ಜನರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಘಟನೆಯಲ್ಲಿ ಇತರ ಮೂವರು ಗಾಯಗೊಂಡಿದ್ದಾರೆ ಎಂದು ಅವರು ಹೇಳಿದರು.

ಶಾಸ್ತ್ರಿ ಪಾರ್ಕ್‌ನ ಮಾಚಿ ಮಾರ್ಕೆಟ್‌ನ ಮಜರ್ ವಾಲಾ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಪೊಲೀಸರಿಗೆ ಮಾಹಿತಿ ಲಭಿಸಿದೆ ಎಂದು ಉಪ ಪೊಲೀಸ್ ಆಯುಕ್ತ (ಈಶಾನ್ಯ) ಜಾಯ್ ಟಿರ್ಕಿ ತಿಳಿಸಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಒಂಬತ್ತು ಜನರನ್ನು ಜಗ್ ಪ್ರವೇಶ್ ಚಂದ್ರ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇವರಲ್ಲಿ ನಾಲ್ವರು ಪುರುಷರು, ಓರ್ವ ಮಹಿಳೆ ಹಾಗೂ ಒಂದೂವರೆ ವರ್ಷದ ಮಗು ಮೃತಪಟ್ಟಿದೆ ಎಂದು ಟಿರ್ಕಿ ಹೇಳಿದರು.

15 ವರ್ಷದ ಬಾಲಕಿ ಮತ್ತು 45 ವರ್ಷದ ವ್ಯಕ್ತಿ ಸುಟ್ಟ ಗಾಯಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, 22 ವರ್ಷದ ಯುವಕನನ್ನು ಪ್ರಥಮ ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ರಾತ್ರಿ ವೇಳೆ ಸೊಳ್ಳೆಗಳಿಂದ ಮುಕ್ತಿ ಪಡೆಯಲು ಹಚ್ಚಿದ್ದ ಸೊಳ್ಳೆ ಬತ್ತಿಯು ಅಕಸ್ಮಾತ್ ಆಗಿ ಹಾಸಿಗೆಯ ಮೇಲೆ ಬಿದ್ದಿದೆ. ವಿಷಕಾರಿ ಹೊಗೆಯಿಂದಾಗಿ ನಿವಾಸಿಗಳು ಪ್ರಜ್ಞೆ ಕಳೆದುಕೊಂಡು ಅಂತಿಮವಾಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ.

ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ. ಬೆಂಕಿಯ ಬಗ್ಗೆ ಮಾಹಿತಿ ಪಡೆದ ನಂತರ ಮೂರು ವಾಹನಗಳು ಸ್ಥಳಕ್ಕೆ ಧಾವಿಸಿದವು ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ- ಬಿಜೆಪಿ

SCROLL FOR NEXT