ಛತ್ರಪತಿ ಸಂಭಾಜಿ ನಗರದ (ಹಿಂದೆ ಔರಂಗಾಬಾದ್ ಎಂದು ಕರೆಯಲಾಗುತ್ತಿತ್ತು) ಕಿರಾದ್‌ಪುರ ಪ್ರದೇಶದಲ್ಲಿ ಬುಧವಾರ ರಾತ್ರಿ ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದೆ. 
ದೇಶ

ಮಹಾರಾಷ್ಟ್ರ: ಸಂಭಾಜಿನಗರದ ಅಹೇರಿ ಗ್ರಾಮದಲ್ಲಿ ಹಿಂಸಾಚಾರಕ್ಕೆ ತಿರುಗಿನ ರಾಮನವಮಿ ಆಚರಣೆ; ಓರ್ವ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಕಿರಾದ್‌ಪುರ ಪ್ರದೇಶದಲ್ಲಿ ಮೊನ್ನೆ ಬುಧವಾರ ಮತ್ತು ನಿನ್ನೆ ಗುರುವಾರ ಮಧ್ಯರಾತ್ರಿಯಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದು ಹಿಂಸಾತ್ಮಕ ರೂಪಕ್ಕೆ ತಿರುಗಿದ ಘಟನೆ ನಡೆದಿದೆ. ಜಿಲ್ಲೆಯ ಅಹೇರಿ ಗ್ರಾಮದಲ್ಲಿ ಇಂದು ನಸುಕಿನ ಜಾವ ಎರಡು ಗುಂಪುಗಳು ಹಿಂಸಾತ್ಮಕ ಕಲ್ಲು ತೂರಾಟದಲ್ಲಿ ತೊಡಗಿದ್ದವು. 

ಛತ್ರಪತಿ ಸಂಭಾಜಿನಗರ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಕಿರಾದ್‌ಪುರ ಪ್ರದೇಶದಲ್ಲಿ ಮೊನ್ನೆ ಬುಧವಾರ ಮತ್ತು ನಿನ್ನೆ ಗುರುವಾರ ಮಧ್ಯರಾತ್ರಿಯಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದು ಹಿಂಸಾತ್ಮಕ ರೂಪಕ್ಕೆ ತಿರುಗಿದ ಘಟನೆ ನಡೆದಿದೆ. ಜಿಲ್ಲೆಯ ಅಹೇರಿ ಗ್ರಾಮದಲ್ಲಿ ಇಂದು ನಸುಕಿನ ಜಾವ ಎರಡು ಗುಂಪುಗಳು ಹಿಂಸಾತ್ಮಕ ಕಲ್ಲು ತೂರಾಟದಲ್ಲಿ ತೊಡಗಿದ್ದವು. 

ಶಾಂತಿ ಕಾಪಾಡಲು ಸಿಆರ್‌ಪಿಎಫ್ ತಂಡ ಸೇರಿದಂತೆ ಭಾರಿ ಪೊಲೀಸ್ ಪಡೆಯನ್ನು ಅಹೇರಿಯಲ್ಲಿ ನಿಯೋಜಿಸಲಾಗಿದೆ. ಉನ್ನತ ಅಧಿಕಾರಿಗಳು ಮತ್ತು ರಾಜಕೀಯ ಮುಖಂಡರು ಬೆಳವಣಿಗೆಗಳ ಮೇಲೆ ನಿಗಾ ಇರಿಸಿರುವುದರಿಂದ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ವರದಿಯಾಗಿದೆ.

ಛತ್ರಪತಿ ಸಂಭಾಜಿನಗರ (ಹಿಂದಿನ ಔರಂಗಾಬಾದ್) ಘರ್ಷಣೆಯಿಂದ ನಲುಗಿದ ಕೇವಲ 24 ಗಂಟೆಗಳ ನಂತರ ಈ ಬೆಳವಣಿಗೆಗಳು ಬರುತ್ತವೆ, ಹಿಂಸಾಚಾರದಲ್ಲಿ ಒಬ್ಬರು ಮೃತಪಟ್ಟಿದ್ದರೆ 15 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡರು. ಸುಮಾರು 20 ಪೊಲೀಸ್ ಮತ್ತು ಖಾಸಗಿ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಹಲವಾರು ಕಲ್ಲು ತೂರಾಟದ ಘಟನೆಗಳೂ ವರದಿಯಾಗಿವೆ.

ರಾಮನವಮಿ ಆಚರಣೆಯ ಮುನ್ನಾದಿನದಂದು ನಡೆದ ಗಲಭೆಗೆ ಸಂಬಂಧಿಸಿದಂತೆ ಕನಿಷ್ಠ ಏಳು ಜನರನ್ನು ಬಂಧಿಸಲಾಗಿದೆ ಮತ್ತು 400 ಕ್ಕೂ ಹೆಚ್ಚು ಜನರ ವಿರುದ್ಧ ಕೇಸು ದಾಖಲಿಸಲಾಗಿದೆ. ನಿನ್ನೆ ರಾಮನವಮಿ ಹಬ್ಬದ ಸಂದರ್ಭದಲ್ಲಿ ಜಲಗಾಂವ್‌ನಲ್ಲೂ ಘರ್ಷಣೆ ನಡೆದಿದೆ. ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದ್ದು, ಹಲವರ ವಿರುದ್ಧ ಕೇಸು ದಾಖಲಾಗಿದೆ. ಈಗ ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ವರದಿಯಾಗಿದೆ.

ಗುರುವಾರ ರಾತ್ರಿ, ಮುಂಬೈನ ಮಲಾಡ್ ಪಶ್ಚಿಮ ಉಪನಗರದ ಅಲ್ಪಸಂಖ್ಯಾತ ಪ್ರಾಬಲ್ಯದ ಮಾಲ್ವಾನಿ ಪ್ರದೇಶದಲ್ಲಿ ಗುಂಪುಗಳು ಕಲ್ಲು ತೂರಾಟದಲ್ಲಿ ತೊಡಗಿದ್ದವು. ಸುಮಾರು 25 ಜನರನ್ನು ಬಂಧಿಸಲಾಯಿತು. ನಡೆಯುತ್ತಿರುವ ರಂಜಾನ್ ಮಾಸವನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದು, ಅಲ್ಲಿನ ಪರಿಸ್ಥಿತಿಯು ಸದ್ಯ ಸಹಜ ಸ್ಥಿತಿಯಲ್ಲಿದೆ. 

ಮುಂಬೈನ ಕಾಂಗ್ರೆಸ್ ಶಾಸಕ ಅಸ್ಲಾಮ್ ಶೇಖ್ ಅವರು ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಲು ಮತ್ತು ಘರ್ಷಣೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. 

ಈ ಮಧ್ಯೆ, ಶಿವಸೇನಾ (ಯುಬಿಟಿ) ಸಂಸದ ಮತ್ತು ಮುಖ್ಯ ವಕ್ತಾರ ಸಂಜಯ್ ರಾವುತ್ ಅವರು ಆಡಳಿತಾರೂಢ ಶಿವಸೇನೆ-ಭಾರತೀಯ ಜನತಾ ಪಕ್ಷದ ಮೈತ್ರಿ ಸರ್ಕಾರ ವಿರುದ್ಧ ಆರೋಪ ಮಾಡಿದ್ದಾರೆ. ಇದು ಪ್ರತಿಪಕ್ಷ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ರ್ಯಾಲಿಯನ್ನು ಹಳಿತಪ್ಪಿಸುವ ಉದ್ದೇಶದಿಂದ 'ರಾಜ್ಯ ಪ್ರಾಯೋಜಿತ' ಗಲಭೆ ಎಂದಿದ್ದಾರೆ. 

ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬಾವಂಕುಲೆ ಅವರು ರಾವುತ್ ಅವರ ಆರೋಪವನ್ನು ತಳ್ಳಿಹಾಕುವ ಮೂಲಕ ತಿರುಗೇಟು ನೀಡಿದ್ದಾರೆ. ಮತ್ತೆ ಪರಿಸ್ಥಿತಿ ಹದಗೆಟ್ಟರೆ ಪ್ರಚೋದನಕಾರಿ ಹೇಳಿಕೆಗಳಿಗೆ ಶಿವಸೇನಾ (ಯುಬಿಟಿ) ಸಂಸದರೇ ಹೊಣೆಯಾಗಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT