ಕುದಿಯುವ ರಸದ ಪಾತ್ರೆಗೆ ಬಿದ್ದು ವ್ಯಕ್ತಿ ಸಾವು: ತಮಿಳುನಾಡಿನಲ್ಲಿ ಭೀಕರ ಘಟನೆ 
ದೇಶ

ಕುದಿಯುವ ರಸಮ್ ಪಾತ್ರೆಗೆ ಬಿದ್ದು ವ್ಯಕ್ತಿ ಸಾವು: ತಮಿಳುನಾಡಿನಲ್ಲಿ ಭೀಕರ ಘಟನೆ

ಕುದಿಯುವ ರಸಮ್ ಪಾತ್ರೆಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಭೀಕರ ಘಟನೆ ಸೋಮವಾರ ತಮಿಳುನಾಡಿನಲ್ಲಿ ನಡೆದಿದೆ.

ಚೆನ್ನೈ: ಕುದಿಯುವ ರಸಮ್ ಪಾತ್ರೆಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಭೀಕರ ಘಟನೆ ಸೋಮವಾರ ತಮಿಳುನಾಡಿನಲ್ಲಿ ನಡೆದಿದೆ.

ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಆಕಸ್ಮಿಕವಾಗಿ ಬಿಸಿ ರಸಮ್ ಕಡಾಯಿಗೆ ಬಿದ್ದ 21 ವರ್ಷದ ಯುವಕ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸಂತ್ರಸ್ತ ಯುವಕ ಕಾಲೇಜು ವಿದ್ಯಾರ್ಥಿಯಾಗಿದ್ದು, ಅಡುಗೆ ಸಂಸ್ಥೆಯಲ್ಲಿ ಪಾರ್ಟ್ ಟೈಮ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ. ಕಳೆದ ವಾರ ಮದುವೆ ಸಮಾರಂಭವೊಂದರಲ್ಲಿ ಈ ಘಟನೆ ನಡೆದಿದೆ ಎಂದು ಸ್ಥಳೀಯ ಸಿಬ್ಬಂದಿ ಹೇಳಿದ್ದಾರೆ.

ಅತಿಥಿಗಳಿಗೆ ಬಡಿಸಲು ಸಿದ್ದಪಡಿಸಲಾಗುತ್ತಿದ್ದ ಕುದಿಯುತ್ತಿದ್ದ ರಸಮ್ ಕಡಾಯಿಗೆ ವ್ಯಕ್ತಿ ಬಿದ್ದಿದ್ದಾನೆ. 

ತೀವ್ರ ಸುಟ್ಟಗಾಯಗಳಾಗಿರುವ ಸಂತ್ರಸ್ತನನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಏಪ್ರಿಲ್ 30 ರಂದು ಮೃತಪಟ್ಟಿದ್ದಾನೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!