ಸಾಂದರ್ಭಿಕ ಚಿತ್ರ 
ದೇಶ

ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮಧ್ಯ ಪ್ರದೇಶ ಮಾಜಿ ಸಿಎಂ ಕೈಲಾಶ್ ಜೋಶಿ ಪುತ್ರ ದೀಪಕ್ ಮುಂದು

ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಕೈಲಾಶ್ ಚಂದ್ರ ಜೋಶಿ ಅವರ ಪುತ್ರ ದೀಪಕ್ ಜೋಶಿ ಅವರು ಬಿಜೆಪಿ ತೊರೆಯಲು ಸಿದ್ಧರಾಗಿದ್ದು, ಮೇ 6 ಅಥವಾ ನಂತರ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ.

ಭೋಪಾಲ್: ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಕೈಲಾಶ್ ಚಂದ್ರ ಜೋಶಿ ಅವರ ಪುತ್ರ ದೀಪಕ್ ಜೋಶಿ ಅವರು ಬಿಜೆಪಿ ತೊರೆಯಲು ಸಿದ್ಧರಾಗಿದ್ದು, ಮೇ 6 ಅಥವಾ ನಂತರ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ.

ಈ ವರ್ಷದ ಕೊನೆಯಲ್ಲಿ ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆ ನಡೆಯಲಿದ್ದು, ಚುನಾವಣೆಗೂ ಮುನ್ನ, 
ಮಾಜಿ ಸಂಸದ ದೀಪಕ್ ಅವರು ಕೈಹಿಡಿಯುವ ಸಾಧ್ಯತೆ ಇದೆ.

2018ರ ಚುನಾವಣೆಯಲ್ಲಿ ದೇವಾಸ್ ಜಿಲ್ಲೆಯ ಹತ್ಪಿಪ್ಲಿಯಾ ಕ್ಷೇತ್ರದಿಂದ ಸೋತ ನಂತರ ಬಿಜೆಪಿಯಲ್ಲಿ ಸೈಡ್ ಲೈನ್ ಆಗಿದ್ದರು. ಸದ್ಯ ರಾಜ್ಯ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದು, ಶೀಘ್ರದಲ್ಲೇ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.

ತಾವು ಕಾಂಗ್ರೆಸ್ ಸೇರುವುದನ್ನು ಖಚಿತಪಡಿಸಿದ ದೀಪಕ್ ಜೋಶಿ ಅವರು, ಈ ವರ್ಷಾಂತ್ಯದಲ್ಲಿ ನಡೆಯುವ ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲಿದೆಯೇ ಎಂದು ನೋಡಲು ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶದವರೆಗೆ ಕಾಯಲು ಬಯಸುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT