ಸಾಂದರ್ಭಿಕ ಚಿತ್ರ 
ದೇಶ

ಕೊಳಗೇರಿಯಲ್ಲಿ ಬೆಂಕಿ ಅವಘಡ; ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರು ಸಜೀವ ದಹನ

ಬಿಹಾರದ ಮುಜಾಫರ್‌ಪುರ ಜಿಲ್ಲೆಯ ರಾಮದಯಾಳು ರೈಲು ನಿಲ್ದಾಣದ ಬಳಿಯ ಜುಗ್ಗಿ ಕ್ಲಸ್ಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರು ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಮುಜಾಫರ್‌ಪುರ: ಬಿಹಾರದ ಮುಜಾಫರ್‌ಪುರ ಜಿಲ್ಲೆಯ ರಾಮದಯಾಳು ರೈಲು ನಿಲ್ದಾಣದ ಬಳಿಯ ಜುಗ್ಗಿ ಕ್ಲಸ್ಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ನಾಲ್ವರು ಅಪ್ರಾಪ್ತ ಬಾಲಕಿಯರು ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಸೋಮವಾರ ರಾತ್ರಿ ಸಂಭವಿಸಿದ ಕೊಳಗೇರಿ ಬೆಂಕಿ ಅವಘಡದಲ್ಲಿ ಇತರ ಏಳು ಜನರಿಗೆ ಸುಟ್ಟ ಗಾಯಗಳಾಗಿದ್ದು, ಜಿಲ್ಲೆಯ ಶ್ರೀಕೃಷ್ಣ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (ಎಸ್‌ಕೆಎಂಸಿಎಚ್) ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರ ಸ್ಥಿತಿ ಗಂಭೀರವಾಗಿದೆ ಎಂದು ಅವರು ಹೇಳಿದರು.

ಬೆಂಕಿ ಅನಾಹುತಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಬೆಂಕಿಯಲ್ಲಿ ಮೃತಪಟ್ಟ ನಾಲ್ವರು ಬಾಲಕಿಯರು ಮೂರರಿಂದ 12 ವರ್ಷದೊಳಗಿನವರಾಗಿದ್ದು, ನರೇಶ್ ರಾಮ್ ಎಂಬ ವ್ಯಕ್ತಿಯ ಪುತ್ರಿಯರೆಂದು ಗುರುತಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸೋಮವಾರ ರಾತ್ರಿ 10.30ರ ಸುಮಾರಿಗೆ ಜುಗ್ಗಿಯಲ್ಲಿ ಈ ಘಟನೆ ನಡೆದಿದೆ ಎಂದು ಮುಶಾರಿ (ಮುಜಾಫರ್‌ಪುರ) ವೃತ್ತಾಧಿಕಾರಿ ಸುಧಾಂಶು ಶೇಖರ್ ತಿಳಿಸಿದ್ದಾರೆ.

ಬೆಂಕಿ ವೇಗವಾಗಿ ವ್ಯಾಪಿಸಿದ್ದು, ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು. ಸ್ವಲ್ಪ ಸಮಯದ ನಂತರ ಬೆಂಕಿಯನ್ನು ಹತೋಟಿಗೆ ತರಲಾಯಿತು. ಘಟನೆ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದರು.

ಗಾಯಾಳುಗಳು ಸೇರಿದಂತೆ ಪ್ರತಿ ಸಂತ್ರಸ್ತರ ಸಂಬಂಧಿಕರಿಗೆ 4 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡುವ ಪ್ರಕ್ರಿಯೆಯನ್ನು ಆಡಳಿತವು ಪ್ರಾರಂಭಿಸಿದೆ ಎಂದು ಶೇಖರ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!