ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿಂದು 3,325 ಹೊಸ ಪ್ರಕರಣ ಪತ್ತೆ, ಕೇರಳದಲ್ಲಿ 7 ಸೇರಿದಂತೆ 17 ಮಂದಿ ಸಾವು

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 3,325 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 44,175ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 3,325 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 44,175ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ ಕೇರಳಲ್ಲಿ 7 ಮಂದಿ ಸೇರಿದಂತೆ ದೇಶದಾದ್ಯಂತ 17 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಈವರೆಗೆ 5,31,564 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ.

ಇದೇ ವೇಳೆ ದೇಶದಲ್ಲಿ ಸೋಂಕಿತರ ಸಂಖ್ಯೆ 4,49,52,996 ಕ್ಕೆ ಏರಿಕೆಯಾಗಿದೆ. ಈ ಪೈಕಿ ಸಕ್ರಿಯ ಪ್ರಕರಣಗಳ ಸಂಖ್ಯೆ 0.11 ಕ್ಕೆ ಇಳಿಕೆಯಾಗಿದೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.71 ರಷ್ಟಿದೆ. ಸದ್ಯ ಈವರೆಗೆ 4,43,77,257 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

ದೈನಂದಿನ ಮರಣ ಪ್ರಮಾಣ ಶೇ 1.18 ರಷ್ಟಿದೆ. ಸಚಿವಾಲಯದ ವೆಬ್‌ಸೈಟಿನಲ್ಲಿ ನೀಡಲಾಗಿರುವ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.66 ಕೋಟಿಗೂ ಅಧಿಕ ಕೋವಿಡ್ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video