ಪೊಲೀಸರು ಹಾಗೂ ಪ್ರತಿಭಟನಾಕಾರರು 
ದೇಶ

ದೆಹಲಿ: ಜಂತರ್ ಮಂತರ್ ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳು- ಪೊಲೀಸರ ನಡುವೆ ಘರ್ಷಣೆ

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಜಂತರ್ ಮಂತರ್ ನಲ್ಲಿ ಕೆಲದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಹಾಗೂ ಪೊಲೀಸರ ನಡುವೆ ತಡರಾತ್ರಿ ಘರ್ಷಣೆ ಸಂಭವಿಸಿದೆ ಎಂದು  ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ನವದೆಹಲಿ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಜಂತರ್ ಮಂತರ್ ನಲ್ಲಿ ಕೆಲದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಹಾಗೂ ಪೊಲೀಸರ ನಡುವೆ ತಡರಾತ್ರಿ ಘರ್ಷಣೆ ಸಂಭವಿಸಿದೆ ಎಂದು  ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಈ ಸಂದರ್ಭದಲ್ಲಿ ಮಾತನಾಡಿರುವ ಕುಸ್ತಿಪಟು ಬಜರಂಗ್ ಫುನಿಯಾ, ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಪೊಲೀಸರು ನಮ್ಮ ಮೇಲೆ ಬಲ ಪ್ರಯೋಗ ಮಾಡಿದ್ದಾರೆ. ಮಹಿಳಾ ಕುಸ್ತಿಪಟುಗಳನ್ನು ನಿಂದಿಸಿದ್ದಾರೆ. ನಮಗೆ ಇಡೀ ದೇಶದ ಬೆಂಬಲದ ಅಗತ್ಯವಿದೆ. ಎಲ್ಲರೂ ದೆಹಲಿಗೆ ಬರಬೇಕು ಎಂದು ಮನವಿ ಮಾಡಿದರು. 

ಘರ್ಷಣೆ ಕುರಿತು ಪ್ರತಿಕ್ರಿಯಿಸಿದ ಡಿಸಿಪಿ ಪ್ರಣವ್ ತಾಯಲ್, ಆಪ್ ನಾಯಕ ಸೋಮನಾಥ್ ಭಾರ್ತಿ ಅನುಮತಿಯಿಲ್ಲದೆ ಮಡಿಸುವ ಹಾಸಿಗೆ ಸಮೇತ ಪ್ರತಿಭಟನಾ ಸ್ಥಳಕ್ಕೆ ಬಂದಾಗ ಪೊಲೀಸರು ಮಧ್ಯ ಪ್ರವೇಶಿಸಿದರು. ಆಗ ಉದ್ರಿಕ್ತರಾದ ಪ್ರತಿಭಟನಾಕಾರರು ಟ್ರಕ್ ನಿಂದ ಬೆಡ್ ಗಳನ್ನು ಹೊರತೆಗೆಯಲು ಪ್ರಯತ್ನಿಸಿದರು. ತದನಂತರ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಸಣ್ಣ ಮಾತಿನ ಚಕಮಕಿ ನಡೆಯಿತು. ಸೋಮನಾಥ್ ಭಾರ್ತಿ  ಅವರೊಂದಿಗೆ ಮತ್ತಿಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ