ಬಜರಂಗದಳ ಕಾರ್ಯಕರ್ತರ ಪ್ರತಿಭಟನೆ 
ದೇಶ

ಕರ್ನಾಟಕ ಚುನಾವಣೆ: ಹೈದರಾಬಾದ್‌ನಲ್ಲಿ ಕಾಂಗ್ರೆಸ್ ಪ್ರಣಾಳಿಕೆ ವಿರೋಧಿಸಿ ಬಜರಂಗದಳ ಪ್ರತಿಭಟನೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ ವಿರೋಧಿಸಿ ಬಜರಂಗದಳ ಕಾರ್ಯಕರ್ತರು ಬುಧವಾರ ಗಾಂಧಿ ಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. 

ಹೈದರಾಬಾದ್: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ ವಿರೋಧಿಸಿ ಬಜರಂಗದಳ ಕಾರ್ಯಕರ್ತರು ಬುಧವಾರ ಗಾಂಧಿ ಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. 

ತೆಲಂಗಾಣದ ಎಲ್ಲಾ ವಿಧಾನಸಭಾ ಕ್ಷೇತ್ರಗಳು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್‌ನ ಪ್ರತಿಕೃತಿ ದಹಿಸಿ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪಿಎಫ್‌ಐ ಮತ್ತು ಬಜರಂಗದಳವನ್ನು ನಿಷೇಧಿಸುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ. ಇದು ಹಿಂದುಪರ ಸಂಘಟನೆ ಬಜರಂಗದಳದ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಭಾರೀ ಪೊಲೀಸ್ ಬಂದೋಬಸ್ತ್ ನಡುವೆಯೂ ಮಂಗಳವಾರ ಬೆಳಗ್ಗೆ 10.30ರ ಸುಮಾರಿಗೆ ಸುಮಾರು 300 ಬಜರಂಗದಳ ಕಾರ್ಯಕರ್ತರು ನಾಲ್ಕು ಹಂತಗಳಲ್ಲಿ ಗಾಂಧಿ ಭವನಕ್ಕೆ ನುಗ್ಗಿ ಪ್ರತಿಭಟನೆ ನಡೆಸಿದರು.

ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬೊಳ್ಳಾರಂ, ಬೇಗಂ ಬಜಾರ್ ಮತ್ತು ಮುಶೀರಾಬಾದ್ ಪೊಲೀಸ್ ಠಾಣೆಗಳಿಗೆ ಕರೆದೊಯ್ದು ಕಾನೂನಿನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್