ಪ್ರಾತಿನಿಧಿಕ ಚಿತ್ರ 
ದೇಶ

ಕೋವಿಡ್-19 ಪ್ರಕರಣಗಳ ಇಳಿಕೆ: ದೇಶದಲ್ಲಿಂದು 3,611 ಹೊಸ ಸೋಂಕು ಪ್ರಕರಣ, ಸಾವಿನ ಸಂಖ್ಯೆ ಅಧಿಕ

ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 3,611 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 36,244 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ನವದೆಹಲಿ: ದಿನದಿಂದ ದಿನಕ್ಕೆ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 3,611 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 36,244 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ, ಕೇರಳದಲ್ಲಿ 9 ಮಂದಿ ಸೇರಿದಂತೆ ದೇಶದಾದ್ಯಂತ 36 ಮಂದಿ ಕೋವಿಡ್‌ನಿಂದಾಗಿ ಸಾವಿಗೀಡಾಗಿದ್ದಾರೆ. ಈ ಮೂಲಕ ಈವರೆಗೆ 5,31,642 ಮಂದಿ ಪ್ರಾಣಕಳೆದುಕೊಂಡಿದ್ದಾರೆ.

ಈವರೆಗೆ ದೇಶದಲ್ಲಿ ಒಟ್ಟು 4,49,64,289 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.07ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.74ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಇನ್ನು ದೇಶದಾದ್ಯಂತ ಈವರೆಗೆ 4,43,99,415 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದು, ದೈನಂದಿನ ಮರಣ ಪ್ರಮಾಣ ಶೇ 1.18ರಷ್ಟಿದೆ.

ಸಚಿವಾಲಯದ ವೆಬ್‌ಸೈಟಿನಲ್ಲಿ ನೀಡಿರುವ ಮಾಹಿತಿ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.66 ಕೋಟಿಗೂ ಅಧಿಕ ಕೋವಿಡ್ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ