ದೇಶ

ದೆಹಲಿ ಅಬಕಾರಿ ಹಗರಣ: ಇಡಿ ಸಲ್ಲಿಸಿದ ಹೊಸ ಚಾರ್ಜ್ ಶೀಟ್ ನಲ್ಲಿ ಸಿಸೋಡಿಯಾ ಆರೋಪಿ

Lingaraj Badiger

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಹೊಸ ಚಾರ್ಜ್ ಶೀಟ್ ಸಲ್ಲಿಸಿದ್ದು, ಅದರಲ್ಲಿ ಮೊದಲ ಬಾರಿಗೆ ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಆರೋಪಿ ಎಂದು ಹೆಸರಿಸಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ.

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ನಾಲ್ಕನೇ ಪೂರಕ ಮತ್ತು ಒಟ್ಟಾರೆ ಐದನೇ ಚಾರ್ಜ್ ಶೀಟ್ ಅನ್ನು ದೆಹಲಿ ವಿಶೇಷ ಪಿಎಂಎಲ್ಎ ನ್ಯಾಯಾಲಯದ ಮುಂದೆ ಸಲ್ಲಿಸಿದೆ.

ಸುಮಾರು 270 ಪುಟಗಳ ಚಾರ್ಜ್ ಶೀಟ್ ನಲ್ಲಿ ಸಿಸೋಡಿಯಾ ಅವರನ್ನು ‘ಪ್ರಮುಖ ಸಂಚುಕೋರ’ ಎಂದು ಇಡಿ ಆರೋಪಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಿಸೋಡಿಯಾ ಅವರನ್ನು ಮಾರ್ಚ್ 9 ರಂದು ತಿಹಾರ್ ಜೈಲಿನಿಂದ ಬಂಧಿಸಿತ್ತು. ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

51 ವರ್ಷದ ಆಮ್ ಆದ್ಮಿ ಪಕ್ಷದ ನಾಯಕನನ್ನು ಮೊದಲು ಸಿಬಿಐ ಬಂಧಿಸಿದ್ದು, ಈ ಪ್ರಕರಣವನ್ನೂ ಸಹ ಕೇಂದ್ರ ತನಿಖಾ ಸಂಸ್ಥೆ ತನಿಖೆ ನಡೆಸುತ್ತಿದೆ.

SCROLL FOR NEXT