ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರ: ಸಾಂಗ್ಲಿಯಲ್ಲಿ ಟ್ರಕ್-ಕಾರು ಮುಖಾಮುಖಿ ಡಿಕ್ಕಿ, ಐವರು ಸಾವು

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಟ್ರಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಹಾಗೂ ಚಾಲಕ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಸಾಂಗ್ಲಿ: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ಟ್ರಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಹಾಗೂ ಚಾಲಕ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ವಿಜಯಪುರ-ಗುಹಾಗರ್ ರಸ್ತೆಯ ಜಾತ್ ಪಟ್ಟಣದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

"ಕುಟುಂಬವು ವಿಜಯಪುರದಿಂದ ಜಾತ್‌ಗೆ ಪ್ರಯಾಣಿಸುತ್ತಿತ್ತು. ಕಾರು ಅಮೃತವಾಡಿ ಫಾಟಾ ತಲುಪಿದಾಗ, ವೇಗವಾಗಿ ಬಂದ ಮಣ್ಣು ತುಂಬಿದ ಟ್ರಕ್ ಅವರ ವಾಹನಕ್ಕೆ ಡಿಕ್ಕಿ ಹೊಡೆದಿದೆ" ಎಂದು ಅಧಿಕಾರಿ ತಿಳಿಸಿದ್ದಾರೆ.

ಮೃತರೆಲ್ಲರೂ ಜಾತ್ ಪಟ್ಟಣದವರಾಗಿದ್ದು, ಯಾತ್ರೆಗೆ ಹೊರಟಿದ್ದರು ಎಂದು ಅವರು ಹೇಳಿದ್ದಾರೆ.

ಮೃತರನ್ನು ಮಯೂರಿ ಸಾವಂತ್(38), ಅವರ ಎಂಟು ವರ್ಷದ ಮಗ ಶ್ಲೋಕ್, ತಂದೆ ನಾಮದೇವ್(65) ಮತ್ತು ತಾಯಿ ಪದ್ಮಿನಿ(60) ಮತ್ತು ಚಾಲಕ ದತ್ತ ಚವಾಣ್(40) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಘಟನೆಯ ನಂತರ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT