ಸ್ಥಳದಲ್ಲಿ ಬಿಗಿ ಭದ್ರತೆ 
ದೇಶ

ಗೋಲ್ಡನ್ ಟೆಂಪಲ್ ಬಳಿ ಮತ್ತೊಂದು ಸ್ಫೋಟ

ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ಹೆರಿಟೇಜ್ ಸ್ಟ್ರೀಟ್‌ನಲ್ಲಿ ಮೇ 6 ರಂದು ಸ್ಫೋಟ ಸಂಭವಿಸಿದ ಸ್ಥಳದ ಸಮೀಪದಲ್ಲೇ ಸೋಮವಾರ ಬೆಳಗ್ಗೆ ಮತ್ತೊಂದು ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮೃತಸರ: ಅಮೃತಸರದ ಗೋಲ್ಡನ್ ಟೆಂಪಲ್ ಬಳಿ ಹೆರಿಟೇಜ್ ಸ್ಟ್ರೀಟ್‌ನಲ್ಲಿ ಮೇ 6 ರಂದು ಸ್ಫೋಟ ಸಂಭವಿಸಿದ ಸ್ಥಳದ ಸಮೀಪದಲ್ಲೇ ಸೋಮವಾರ ಬೆಳಗ್ಗೆ ಮತ್ತೊಂದು ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಸಂಭವಿಸಿದ ಸ್ಫೋಟದಲ್ಲಿ ಯಾರೂ ಗಾಯಗೊಂಡಿಲ್ಲ ಅಥವಾ ಯಾವುದೇ ಹಾನಿ ಸಂಭವಿಸಿಲ್ಲ. ಆದರೆ ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದ್ದಾರೆ.

ಗೋಲ್ಡನ್ ಟೆಂಪಲ್‌ಗೆ ಹೋಗುವ ಹೆರಿಟೇಜ್ ಸ್ಟ್ರೀಟ್‌ನಲ್ಲಿ ಶನಿವಾರ ಸಂಭವಿಸಿದ ಸ್ಥಳದ ಸಮೀಪವೇ ಈ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಇಂದು ಬೆಳಗ್ಗೆ 6:30 ರ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ ಎಂದು  ವರದಿಯಾಗಿದೆ.

ಪೊಲೀಸರು ಮತ್ತು ಫೋರೆನ್ಸಿಕ್ ತಂಡಗಳು ತಕ್ಷಣವೇ ಸ್ಥಳಕ್ಕೆ ಆಗಮಿಸಿ ತನಿಖೆಗಾಗಿ ಸಾಕ್ಷ್ಯಗಳನ್ನು ಸಂಗ್ರಹಿಸಲು ಪ್ರಾರಂಭಿಸಿದ್ದು, ಈ ಎರಡು ಸ್ಫೋಟಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಶನಿವಾರದ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಗಾಯಗೊಂಡಿದ್ದರು ಮತ್ತು ಕೆಲವು ಕಟ್ಟಡಗಳು  ಹಾನಿಗೊಳಗಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ