ದೇಶ

ಪ್ರತಿಪಕ್ಷಗಳನ್ನು ಒಗ್ಗೂಡಿಸವ ಯತ್ನ: ಮೇ 9 ರಂದು ನಿತೀಶ್ ಕುಮಾರ್ ರಿಂದ ನವೀನ್ ಪಟ್ನಾಯಕ್ ಭೇಟಿ

Lingaraj Badiger

ಪಾಟ್ನಾ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಎಲ್ಲಾ ಪ್ರತಿಪಕ್ಷಗಳನ್ನು ಒಗ್ಗೂಡಿಸುವ  ಪ್ರಯತ್ನದ ಭಾಗವಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮೇ 9 ರಂದು ಒಡಿಶಾ ಮುಖ್ಯಮಂತ್ರಿ ಮತ್ತು ಮತ್ತೊಬ್ಬ ಪ್ರಾದೇಶಿಕ ಪಕ್ಷದ ಪ್ರಬಲ ವ್ಯಕ್ತಿ ನವೀನ್ ಪಟ್ನಾಯಕ್ ಅವರನ್ನು ಭೇಟಿಯಾಗಲಿದ್ದಾರೆ. 

ಈ ಮುಂಚೆ ಮೇ 5 ರಂದು ಪಟ್ನಾಯಕ್ ಅವರನ್ನು ಭೇಟಿ ಮಾಡಲು ನಿತೀಶ್ ನಿರ್ಧರಿಸಿದ್ದರು. ಆದರೆ ಒಡಿಶಾ ಮುಖ್ಯಮಂತ್ರಿಯ ಬಿಡುವಿಲ್ಲದ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಂಡು ಉಭಯ ನಾಯಕ ಭೇಟಿಯನ್ನು ಮೇ 9 ಕ್ಕೆ ಮುಂದೂಡಲಾಗಿದೆ.

ಬಿಜೆಪಿಯ ವೇಗಕ್ಕೆ ಬ್ರೇಕ್ ಹಾಕಲು ನಿತೀಶ್ ಕುಮಾರ್ ಅವರು ಸಾಧ್ಯವಾದಷ್ಟು ವಿರೋಧ ಪಕ್ಷಗಳ ಒಟ್ಟುಗೂಡಿಸುವ ತಮ್ಮ ಪ್ರಯತ್ನ ಮುಂದುವರೆಸಿದ್ದಾರೆ. ಈ ನಿಟ್ಟಿನಲ್ಲಿ, ನಿತೀಶ್ ಕುಮಾರ್ ಮತ್ತು ಅವರ ಉಪ ಮುಖ್ಯಮಂತ್ರಿ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಿದ್ದರು.

SCROLL FOR NEXT