ದೇಶ

ಕೋವಿಡ್-19: ದೇಶದಲ್ಲಿಂದು 1,331 ಹೊಸ ಕೇಸ್ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ

Ramyashree GN

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,331 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 22,742 ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಈಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,49,72,800 ಕ್ಕೆ ಏರಿಕೆಯಾಗಿದೆ. ಇವೇ ಅವಧಿಯಲ್ಲಿ ದೇಶದಾದ್ಯಂತ 11 ಮಂದಿ ಸಾವಿಗೀಡಾಗಿದ್ದು, ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 5,31,707 ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.06ರಷ್ಟು ಸಕ್ರಿಯ ಪ್ರಕರಣಗಳಿದ್ದು, ಕೋವಿಡ್ ರಾಷ್ಟ್ರೀಯ ಚೇತರಿಕೆ ದರ ಶೇ 98.76 ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಈವರೆಗೆ 4,44,18,351 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ದೈನಂದಿನ ಮರಣ ಪ್ರಮಾಣ ಶೇ 1.18 ರಷ್ಟಿದೆ. ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ, ಈವರೆಗೆ 220.66 ಕೋಟಿಗೂ ಅಧಿಕ ಕೋವಿಡ್ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

SCROLL FOR NEXT