ಕರ್ನಾಟಕ ವಿಧಾನಸಭೆ ಚುನಾವಣೆ: ಮತದಾನ ಹಿನ್ನೆಲೆ ಮೇ 10ರಂದು ವೇತನ ಸಹಿತ ರಜೆ ಘೋಷಿಸಿದ ಗೋವಾ ಸರ್ಕಾರ
ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಬುಧವಾರ ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು, ಕೈಗಾರಿಕಾ ಕಾರ್ಮಿಕರು ಸೇರಿದಂತೆ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವರರಿಗೆ ಗೋವಾ ಸರ್ಕಾರ ವೇತನಸಹಿತ ರಜೆ ನೀಡಿ ಸೋಮವಾರ ಅಧಿಸೂಚನೆ ಹೊರಡಿಸಿದೆ.
ಪಣಜಿ(ಗೋವಾ): ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಬುಧವಾರ ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು, ಕೈಗಾರಿಕಾ ಕಾರ್ಮಿಕರು ಸೇರಿದಂತೆ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವರರಿಗೆ ಗೋವಾ ಸರ್ಕಾರ ವೇತನಸಹಿತ ರಜೆ ನೀಡಿ ಸೋಮವಾರ ಅಧಿಸೂಚನೆ ಹೊರಡಿಸಿದೆ.
ಗೋವಾ ಮುಖ್ಯಮಂತ್ರಿ ಸಿಎಂ ಪ್ರಮೋದ್ ಸಾವಂತ್ ಸರ್ಕಾರ ಈ ಅಧಿಸೂಚನೆ ಹೊರಡಿಸಿದ್ದು, ಈ ಅಧಿಸೂಚನೆಗೆ ವಿರೋಧ ಪಕ್ಷಗಳು ಮತ್ತು ಖಾಸಗಿ ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿವೆ. ಗೋವಾ ಸರ್ಕಾರದ ಈ ನಿರ್ಧಾರಕ್ಕೆ ಗೋವಾ ಸ್ಟೇಟ್ ಇಂಡಸ್ತ್ರೀಸ್ ಅಸೋಸಿಯೇಶನ್ ವಿರೋಧ ವ್ಯಕ್ತಪಡಿಸಿದೆ.
ಗೋವಾ ರಾಜ್ಯ ಕೈಗಾರಿಕೆಗಳ ಸಂಘದ ಅಧ್ಯಕ್ಷ ದಾಮೋದರ್ ಕೋಚ್ಕರ್ ಸರ್ಕಾರದ ನಡೆಯನ್ನು ಪ್ರಶ್ನಿಸಿದ್ದು, "ಇದು ಸಂಪೂರ್ಣ ಅಸಂಬದ್ಧವಾದದ್ದು. ಮೂರ್ಖತನದ ತೀರ್ಮಾನವಾಗಿದೆ ಎಂದು ಹೇಳಿದ್ದಾರೆ.
ಚುನಾವಣಾ ಲಾಭಕ್ಕಾಗಿ ಕೈಗಾರಿಕೆಗಳನ್ನು ಸುಲಿಗೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಇಂತಹ ಏಕಪಕ್ಷೀಯ ನಿರ್ಧಾರಗಳ ವಿರುದ್ಧ ಕಾನೂನಿನ ಮೊರೆ ಹೋಗಬೇಕಾಗಿದೆ ಎಂದು ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.