ರಾಕಿ ಸಾವಂತ್ 
ದೇಶ

ಚೆಕ್ ಬೌನ್ಸ್ ಪ್ರಕರಣ: ಬಾಲಿವುಡ್ ನಟಿ ರಾಖಿ ಸಾವಂತ್ ಸಹೋದರ ಬಂಧನ

ಹಳೆಯ ಚೆಕ್ ಬೌನ್ಸ್ ಪ್ರಕರಣದಲ್ಲಿ ಬಾಲಿವುಡ್ ನಟಿ ರಾಖಿ ಸಾವಂತ್ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಸ್ಥಳೀಯ ನ್ಯಾಯಾಲಯ ವಾರಂಟ್ ಹೊರಡಿಸಿದ ನಂತರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಮುಂಬೈ: ಹಳೆಯ ಚೆಕ್ ಬೌನ್ಸ್ ಪ್ರಕರಣದಲ್ಲಿ ಬಾಲಿವುಡ್ ನಟಿ ರಾಖಿ ಸಾವಂತ್ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ವಿರುದ್ಧ ಸ್ಥಳೀಯ ನ್ಯಾಯಾಲಯ ವಾರಂಟ್ ಹೊರಡಿಸಿದ ನಂತರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ರಾಕೇಶ್ ಸಾವಂತ್ ಅವರನ್ನು ಭಾನುವಾರ ಬಂಧಿಸಲಾಗಿತ್ತು. ಆತನನ್ನು  ಅಂಧೇರಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮೇ 22 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2020 ರಲ್ಲಿ ಉದ್ಯಮಿಯೊಬ್ಬರು ರಾಕೇಶ್ ಸಾವಂತ್ ವಿರುದ್ಧ ಚೆಕ್ ಬೌನ್ಸ್ ಆಗಿರುವ ದೂರು ದಾಖಲಿಸಿದ್ದ ನಂತರ ಅವರನ್ನು ಪೊಲೀಸರು ಬಂಧಿಸಿದ್ದರು.  ನಂತರ ದೂರುದಾರರ ಹಣವನ್ನು ಹಿಂದಿರುಗಿಸುವ ಭರವಸೆ ಮೇರೆಗೆ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಆದರೆ ಹಣ ಮರಳಿಸುವಲ್ಲಿ ಅವರು ವಿಫಲರಾಗಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ. 

ಅಂಧೇರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ರಾಕೇಶ್ ಆನಂದ್ ಸಾವಂತ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ ನಂತರ ಅವರನ್ನು ಬಂಧಿಸಲಾಗಿದೆ. ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್