ರಂಜನ್ ಗೊಗೊಯ್ 
ದೇಶ

ಮಾಜಿ ಸಿಜೆಐ ರಂಜನ್‌ ಗೊಗೊಯ್, ಪ್ರಕಾಶಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ರಂಜನ್ ಗೊಗೊಯ್ ವಿರುದ್ಧ ಒಂದು ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಮತ್ತು ಅವರ ಆತ್ಮಕಥೆಗೆ ತಡೆಯಾಜ್ಞೆ ಕೋರಿ ಅಸ್ಸಾಂ ಲೋಕೋಪಯೋಗಿ (ಎಪಿಡಬ್ಲ್ಯು) ಅಧ್ಯಕ್ಷ ಅಭಿಜೀತ್ ಶರ್ಮಾ ಅವರು ಇಲ್ಲಿನ ಸ್ಥಳೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಗುವಾಹಟಿ: ರಾಜ್ಯಸಭಾ ಸಂಸದ ಮತ್ತು ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ರಂಜನ್ ಗೊಗೊಯ್ ವಿರುದ್ಧ ಒಂದು ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಮತ್ತು ಅವರ ಆತ್ಮಕಥೆಗೆ ತಡೆಯಾಜ್ಞೆ ಕೋರಿ ಅಸ್ಸಾಂ ಲೋಕೋಪಯೋಗಿ (ಎಪಿಡಬ್ಲ್ಯು) ಅಧ್ಯಕ್ಷ ಅಭಿಜೀತ್ ಶರ್ಮಾ ಅವರು ಇಲ್ಲಿನ ಸ್ಥಳೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಗೊಗೊಯ್ ಮತ್ತು ರೂಪಾ ಪಬ್ಲಿಕೇಷನ್ಸ್ ವಿರುದ್ಧ ಶರ್ಮಾ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಮತ್ತು ಅವರ ಆತ್ಮಚರಿತ್ರೆ 'ಜಸ್ಟೀಸ್ ಫಾರ್ ಎ ಜಡ್ಜ್' ಪುಸ್ತಕದಲ್ಲಿ ತಮ್ಮ ವಿರುದ್ಧ ತಪ್ಪುದಾರಿಗೆಳೆಯುವ ಮತ್ತು ಮಾನಹಾನಿಕರ ಹೇಳಿಕೆಗಳನ್ನು ಪ್ರಕಟಿಸಿದ್ದಾರೆ ಎಂದು ದೂರಿದ್ದಾರೆ.

ಗೊಗೊಯ್ ಮತ್ತು ಅವರ ಪ್ರಕಾಶಕರು ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಮತ್ತು ಆರೋಪಗಳನ್ನು ಹೊಂದಿರುವ ಯಾವುದೇ ಪುಸ್ತಕವನ್ನು ಮುಂದೆ ಪ್ರಕಟಿಸುವುದು, ವಿತರಿಸುವುದು ಅಥವಾ ಮಾರಾಟ ಮಾಡುವುದನ್ನು ತಡೆಯುವ ಮಧ್ಯಂತರ ತಡೆಯಾಜ್ಞೆಯನ್ನು ಕೋರಿ ಅವರು ಅರ್ಜಿಯನ್ನು ಸಲ್ಲಿಸಿದ್ದಾರೆ.

ಇಲ್ಲಿನ ಕಾಮ್ರೂಪ್ ಮೆಟ್ರೋ ಜಿಲ್ಲಾ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಮತ್ತು ತಡೆಯಾಜ್ಞೆಗೆ ಅರ್ಜಿ ಸಲ್ಲಿಸಲಾಗಿದೆ.

ಮಂಗಳವಾರ ವಿಚಾರಣೆ ನಡೆಸಿದ ನ್ಯಾಯಾಲಯವು, ಅರ್ಜಿ ಮತ್ತು ದಾಖಲೆಗಳನ್ನು ಪರಿಶೀಲಿಸಿದ ನಂತರ ಬುಧವಾರದ ತನ್ನ ತೀರ್ಪಿನಲ್ಲಿ 'ಕಾನೂನು ಮತ್ತು ತೀರ್ಪು ನೀಡಬೇಕಾದ ಸಂಗತಿಗಳೆರಡರಲ್ಲೂ ಗಣನೀಯ ಪ್ರಶ್ನೆ ಇದೆ' ಎಂದು ಕಂಡುಬಂದಿದೆ ಎಂದು ಹೇಳಿದೆ.

ಅರ್ಜಿದಾರರು ಮತ್ತು ಪ್ರತಿವಾದಿಗಳಿಬ್ಬರಿಗೂ ಸಮನ್ಸ್ ಜಾರಿಗೊಳಿಸಲು ಸೂಚಿಸಿದ ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಜೂನ್ 3ಕ್ಕೆ ಮುಂದೂಡಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT