ಉದ್ಧವ್ ಠಾಕ್ರೆ 
ದೇಶ

ನನ್ನಂತೆಯೇ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕು: ಉದ್ಧವ್ ಠಾಕ್ರೆ

ನನ್ನಂತೆಯೇ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕು ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಗುರುವಾರ ಹೇಳಿದ್ದಾರೆ.

ನವದೆಹಲಿ: ನನ್ನಂತೆಯೇ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕು ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಗುರುವಾರ ಹೇಳಿದ್ದಾರೆ.

ಮಹಾರಾಷ್ಟ್ರ ಮೂಲ ಶಿವಸೇನೆಯಿಂದ ಬಂಡಾಯವೆದ್ದು ಏಕನಾಥ ಶಿಂಧೆ ಹಿಂದೆ ಹೋಗಿದ್ದ 16 ಮಂದಿ ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಕೋರಿ ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ.

ತೀರ್ಪು ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜೊತೆಗೂಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉದ್ಧವ್ ಠಾಕ್ರೆಯವರು ಪ್ರಜಾಪ್ರಭುತ್ವವನ್ನು ಹತ್ಯೆ ಮಾಡಿ ಏಕನಾಥ್ ಶಿಂಧೆಯವರು ಗೆದ್ದಿದ್ದಾರೆ. ನನ್ನಂತೆಯೇ ಏಕನಾಥ್ ಶಿಂಧೆ ಕೂಡ ರಾಜೀನಾಮೆ ನೀಡಬೇಕು ಎಂದು ಹೇಳಿದರು.

ಕಳೆದ ವರ್ಷ ಜೂನ್ ತಿಂಗಳಿನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ. ಈ ರಾಜೀನಾಮೆ ಕಾನೂನು ರೀತಿಯಾಗಿ ತಪ್ಪಾಗಿರಬಹುದು. ಆದರೆ, ನೈತಿಕ ಆಧಾರದ ಮೇಲೆ ನಾನು ರಾಜೀನಾಮೆ ನೀಡಿದ್ದೆ ಎಂದು ತಿಳಿಸಿದರು.

ಶಿಂಧೆ ಬಣದ ಶಾಸಕರು ನನ್ನ ಪಕ್ಷಕ್ಕೆ ಮತ್ತು ನನ್ನ ತಂದೆ (ಬಾಳ ಠಾಕ್ರೆ) ಪರಂಪರೆಗೆ ದ್ರೋಹ ಮಾಡಿದ್ದಾರೆ. ನನ್ನಂತೆಯೇ ಅವರೂ ರಾಜೀನಾಮೆ ನೀಡಬೇಕು ಎಂದರು.

ಬಳಿಕ ಮಾತನಾಡಿದ ನಿತೀಶ್ ಕುಮಾರ್ ಅವರು, ಮಹಾರಾಷ್ಟ್ರದ ಹಾಲಿ ಸಿಎಂ ಮತ್ತು ಉಪ ಮುಖ್ಯಮಂತ್ರಿಗೆ ನೈತಿಕತೆ ಇದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಇದೇ ವೇಳೆ, ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವವರು ದೇಶಕ್ಕಾಗಿ ಕೆಲಸ ಮಾಡುತ್ತಿಲ್ಲ...ಹೀಗಾಗಿ ದೇಶದ ಎಲ್ಲಾ ರಾಜಕೀಯ ಪಕ್ಷಗಳು ಒಟ್ಟಾಗಿ ಕೆಲಸ ಮಾಡಲು ಒಗ್ಗೂಡಬೇಕಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!