ಪಿಎಂ ನರೇಂದ್ರ ಮೋದಿ 
ದೇಶ

ತಂತ್ರಜ್ಞಾನ ದೇಶದ ಬೆಳವಣಿಗೆ ಪಥಕ್ಕೆ ವೇಗ ಹೆಚ್ಚಿಸುವ ಸಾಧನ, 2047ಕ್ಕೆ ಅಭಿವೃದ್ಧಿ ಮತ್ತು ಸ್ವಾವಲಂಬನೆ ನಮ್ಮ ಗುರಿ: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುರುವಾರ ದೆಹಲಿಯಲ್ಲಿ 2023ನೇ ಸಾಲಿನ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಗುರುತಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮವು ಮೇ 11-14 ರವರೆಗೆ ನಡೆಯಲಿರುವ ರಾಷ್ಟ್ರೀಯ ತಂತ್ರಜ್ಞಾನ ದಿನದ 25 ನೇ ವರ್ಷದ ಆಚರಣೆಯ ಪ್ರಾರಂಭವಾಗಿದೆ. 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುರುವಾರ ದೆಹಲಿಯಲ್ಲಿ 2023ನೇ ಸಾಲಿನ ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಗುರುತಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮವು ಮೇ 11-14 ರವರೆಗೆ ನಡೆಯಲಿರುವ ರಾಷ್ಟ್ರೀಯ ತಂತ್ರಜ್ಞಾನ ದಿನದ 25 ನೇ ವರ್ಷದ ಆಚರಣೆಯ ಪ್ರಾರಂಭವಾಗಿದೆ. 

ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್ ಉಪಸ್ಥಿತರಿದ್ದರು. ಪ್ರಧಾನಮಂತ್ರಿಯವರು 5,800 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ದೇಶದ ವೈಜ್ಞಾನಿಕ ಮತ್ತು ತಾಂತ್ರಿಕ ಪ್ರಗತಿಗೆ ಸಂಬಂಧಿಸಿದ ಅನೇಕ ಯೋಜನೆಗಳಿಗೆ ಅಡಿಪಾಯ ಹಾಕಿದ್ದಲ್ಲದೆ ದೇಶಕ್ಕೆ ಸಮರ್ಪಿಸಿದರು. 

ಶಂಕುಸ್ಥಾಪನೆಗೊಂಡ ಯೋಜನೆಗಳಲ್ಲಿ ಲೇಸರ್ ಇಂಟರ್‌ಫೆರೋಮೀಟರ್ ಗ್ರಾವಿಟೇಷನಲ್-ವೇವ್ ಅಬ್ಸರ್ವೇಟರಿ-ಇಂಡಿಯಾ (LIGO-ಇಂಡಿಯಾ), ಒಡಿಶಾದ ಹಿಂಗೋಲಿ; ಹೋಮಿ ಬಾಬಾ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಜತ್ನಿ ಮತ್ತು ಮುಂಬೈಯ ಟಾಟಾ ಮೆಮೋರಿಯಲ್ ಆಸ್ಪತ್ರೆಯ ಪ್ಲಾಟಿನಂ ಜುಬಿಲಿ ಬ್ಲಾಕ್ ನ್ನು ಒಳಗೊಂಡಿವೆ.

ರಾಷ್ಟ್ರೀಯ ತಂತ್ರಜ್ಞಾನ ದಿನ: ಭಾರತದ ವೈಜ್ಞಾನಿಕ ಮತ್ತು ತಾಂತ್ರಿಕ ಪ್ರಗತಿಗೆ ಶ್ರಮಿಸಿದ, ಮೇ 1998 ರಲ್ಲಿ ಪೋಖ್ರಾನ್ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸುವಂತೆ ಮಾಡಿದ ಭಾರತೀಯ ವಿಜ್ಞಾನಿಗಳು, ಎಂಜಿನಿಯರ್‌ಗಳು ಮತ್ತು ತಂತ್ರಜ್ಞರನ್ನು ಗೌರವಿಸಲು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು 1999 ರಲ್ಲಿ ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆಯನ್ನು ಪ್ರಾರಂಭಿಸಿದರು.

ಅಂದಿನಿಂದ, ಪ್ರತಿ ವರ್ಷ ಮೇ 11 ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ. ಇದನ್ನು ಪ್ರತಿ ವರ್ಷ ಹೊಸ ಮತ್ತು ವಿಭಿನ್ನ ವಿಷಯಗಳೊಂದಿಗೆ ಆಚರಿಸಲಾಗುತ್ತದೆ. ಈ ವರ್ಷದ ವಿಷಯ 'ಸ್ಕೂಲ್ ಟು ಸ್ಟಾರ್ಟಪ್ಸ್- ಇಗ್ನೈಟಿಂಗ್ ಯಂಗ್ ಮೈಂಡ್ಸ್ ಟು ಇನ್ನೋವೇಟ್' ಎಂಬುದಾಗಿದೆ. 

ಯೋಜನೆಗಳನ್ನು ದೇಶಕ್ಕೆ ಸಮರ್ಪಿಸಿ ಮಾತನಾಡಿದ ಪಿಎಂ ನರೇಂದ್ರ ಮೋದಿ, ನಾವು 2047ಕ್ಕೆ ನಿರ್ದಿಷ್ಟ ಗುರಿಯನ್ನು ಹೊಂದಿದ್ದೇವೆ, ನಮ್ಮ ದೇಶವನ್ನು ಅಭಿವೃದ್ಧಿ ಮತ್ತು ಸ್ವಾವಲಂಬಿಯನ್ನಾಗಿ ಮಾಡಬೇಕಾಗಿದೆ. ಅದು ದೇಶದ ಆರ್ಥಿಕ ಬೆಳವಣಿಗೆಯಾಗಿರಲಿ ಅಥವಾ ಸುಸ್ಥಿರ ಅಭಿವೃದ್ಧಿ ಗುರಿಯಾಗಿರಲಿ ಅಥವಾ ನಾವೀನ್ಯತೆಗೆ ಅಂತರ್ಗತ ಪರಿಸರ ವ್ಯವಸ್ಥೆಯನ್ನು ರೂಪಿಸುತ್ತಿರಲಿ, ಪ್ರತಿ ಹಂತದಲ್ಲೂ ತಂತ್ರಜ್ಞಾನವು ಮುಖ್ಯವಾಗಿದೆ ಎಂದರು. 

ರಾಷ್ಟ್ರೀಯ ತಂತ್ರಜ್ಞಾನ ದಿನದಂದು, ತಂತ್ರಜ್ಞರ ಪರಿಶ್ರಮಕ್ಕಾಗಿ ಭಾರತವು ನಮ್ಮ ವಿಜ್ಞಾನಿಗಳಿಗೆ ವಂದನೆಗಳನ್ನು ಸಲ್ಲಿಸುತ್ತದೆ. 1998 ರಲ್ಲಿ ಯಶಸ್ವಿ ಪೋಖ್ರಾನ್ ಪರೀಕ್ಷೆಗಳಿಗೆ ಕಾರಣವಾದ ಅಟಲ್ ಅವರ ಆದರ್ಶ ನಾಯಕತ್ವವನ್ನು ನಾವು ನೆನಪಿಸಿಕೊಳ್ಳುತ್ತೇವೆ ಎಂದರು.

ಭಾರತ ದೇಶಕ್ಕೆ ತಂತ್ರಜ್ಞಾನವು ದೇಶದ ಬೆಳವಣಿಗೆಯ ಪಥಕ್ಕೆ ವೇಗವನ್ನು ಸೇರಿಸುವ ಸಾಧನವಾಗಿದೆ.ಅಟಲ್ ಟಿಂಕರಿಂಗ್ ಲ್ಯಾಬ್‌ಗಳು ಯುವಕರಲ್ಲಿ ಹೊಸತನದ ಬೀಜಗಳನ್ನು ಪೋಷಿಸುತ್ತಿವೆ.ಯುವ ಶಕ್ತಿಯಿಂದ ನಡೆಸಲ್ಪಡುತ್ತಿರುವ ಭಾರತವು ಸ್ಟಾರ್ಟ್-ಅಪ್‌ಗಳ ಜಗತ್ತಿನಲ್ಲಿ ದಾಪುಗಾಲು ಹಾಕುತ್ತಿದೆ. ಭಾರತೀಯರು ಇತ್ತೀಚಿನ ವರ್ಷಗಳಲ್ಲಿ ಡಿಜಿಟಲ್ ಪಾವತಿಯನ್ನು ಸ್ವೀಕರಿಸಿದ್ದಾರೆ. UPI ಹೊಸ ಸಾಮಾನ್ಯ ಪಾವತಿ ವಿದಾನವಾಗಿದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT