ಸಾಂದರ್ಭಿಕ ಚಿತ್ರ 
ದೇಶ

CBSE 10ನೇ ತರಗತಿ ಫಲಿತಾಂಶ ಪ್ರಕಟ: ಶೇ.93.12 ರಷ್ಟು ವಿದ್ಯಾರ್ಥಿಗಳು ತೇರ್ಗಡೆ, ಫಲಿತಾಂಶ ವೀಕ್ಷಿಸಲು ಈ ಕೆಳಗಿನ ಲಿಂಕ್ ಬಳಸಿ

12ನೇ ತರಗತಿ ಫಲಿತಾಂಶ ಪ್ರಕಟ ಬೆನ್ನಲ್ಲೇ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ CBSEಯ 10ನೇ ತರಗತಿ ಫಲಿತಾಂಶ ಪ್ರಕಟವಾಗಿದೆ.  

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಶುಕ್ರವಾರ 10 ನೇ ತರಗತಿಯ ಪರೀಕ್ಷಾ ಫಲಿತಾಂಶಗಳನ್ನು ಪ್ರಕಟಿಸಿದ್ದು, ಇದರಲ್ಲಿ ಶೇಕಡಾ 93.12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಶೇಕಡಾ 94.25 ಫಲಿತಾಂಶದೊಂದಿಗೆ ಬಾಲಕಿಯರು ಮತ್ತೊಮ್ಮೆ ಮೇಲುಗೈ ಸಾಧಿಸಿದ್ದು, ಬಾಲಕರು ಶೇಕಡಾ 92.27ರಷ್ಟು ಮಂದಿ ತೇರ್ಗಡೆ ಹೊಂದಿದ್ದಾರೆ. 10 ನೇ ತರಗತಿ ಪರೀಕ್ಷೆಯಲ್ಲಿ ಸುಮಾರು ಶೇಕಡಾ 90ರಷ್ಟು ತೃತೀಯಲಿಂಗ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಈ ವರ್ಷ ದೇಶಾದ್ಯಂತ 21,65,805 ವಿದ್ಯಾರ್ಥಿಗಳು CBSE 10ನೇ ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 20,16,779 ಮಂದಿ ಉತ್ತೀರ್ಣರಾಗಿದ್ದಾರೆ. 1,95,799 ವಿದ್ಯಾರ್ಥಿಗಳು ಶೇ 90ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ ಎಂದು ಸಿಬಿಎಸ್‌ಇ ತಿಳಿಸಿದೆ. ಒಟ್ಟು ಶೇಕಡಾ 2 ರಷ್ಟು ವಿದ್ಯಾರ್ಥಿಗಳು (44,297) ಶೇಕಡಾ 95 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ.

CBSE ಪ್ರಕಾರ, ತಿರುವನಂತಪುರಂ ಪ್ರದೇಶವು 99.91 ಶೇಕಡಾ ಉತ್ತೀರ್ಣತೆಯೊಂದಿಗೆ ದೇಶದಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಬೆಂಗಳೂರು 99.18 ಶೇಕಡಾದೊಂದಿಗೆ ಎರಡನೇ ಸ್ಥಾನದಲ್ಲಿದೆ. 99.14ರಷ್ಟು ಉತ್ತೀರ್ಣರಾಗುವ ಮೂಲಕ ಚೆನ್ನೈ ವಿಭಾಗ ಮೂರನೇ ಸ್ಥಾನದಲ್ಲಿದೆ.

ಈ ವರ್ಷ 'ವಿಶೇಷ ಅಗತ್ಯವುಳ್ಳ ಮಕ್ಕಳು' ವಿಭಾಗದಲ್ಲಿ 278 ವಿದ್ಯಾರ್ಥಿಗಳು ಶೇಕಡಾ 90 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದರೆ, ಈ ವಿಭಾಗದ 58 ವಿದ್ಯಾರ್ಥಿಗಳು ಶೇಕಡಾ 95 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ.

ಅಲ್ಲದೆ, ಒಟ್ಟು 1,34,774 ವಿದ್ಯಾರ್ಥಿಗಳು ಕಂಪಾರ್ಟ್‌ಮೆಂಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. CBSE 10ನೇ ತರಗತಿ ಫಲಿತಾಂಶ ನೋಡಲು cbse.gov.in ಮತ್ತು cbse.nic.in ನಲ್ಲಿ ಪರಿಶೀಲಿಸಬಹುದು. 

ಫಲಿತಾಂಶಗಳನ್ನು ಪರಿಶೀಲಿಸಲು cbseresults.nic.in, results.cbse.nic.in, digilocker.gov.in ಮತ್ತು results.gov.in. ವೆಬ್‌ಸೈಟ್‌ಗಳನ್ನು ನೋಡಬಹುದು. ಫಲಿತಾಂಶಗಳನ್ನು ಮೊಬೈಲ್ ಅಪ್ಲಿಕೇಷನ್- ಡಿಜಿಲಾಕರ್ ಮತ್ತು ಉಮಾಂಗ್ ನಲ್ಲಿ ಕೂಡ ನೋಡಬಹುದು. 

ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭಾಶಯ ತಿಳಿಸಿ ಅವರ ಮುಂದಿನ ಪಯಣ ಯಶಸ್ವಿಯಾಗಿರಲಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT