ಮನೀಶ್ ಸಿಸೋಡಿಯಾ 
ದೇಶ

ದೆಹಲಿ ಅಬಕಾರಿ ಹಗರಣ: ಜೂನ್ 2ರವರೆಗೆ ಮನೀಶ್ ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ

ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಶುಕ್ರವಾರ ಜೂನ್ 2ವರೆಗೆ ವಿಸ್ತರಿಸಿದೆ.

ನವದೆಹಲಿ: ಸಿಬಿಐ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಶುಕ್ರವಾರ ಜೂನ್ 2ವರೆಗೆ ವಿಸ್ತರಿಸಿದೆ.

ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳು ನಡೆದಿದ್ದು, ಇದಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯಲ್ಲಿ ಸಿಸೋಡಿಯಾ ಅವರನ್ನು ಸಿಬಿಐ ಮತ್ತು ಇಡಿ ಬಂಧನಕ್ಕೊಳಪಡಿಸಿದೆ.

ಇತ್ತೀಚೆಗೆ ರದ್ದಾದ ದೆಹಲಿ ಅಬಕಾರಿ ನೀತಿ 2021-22 ಅನ್ನು ರಾಷ್ಟ್ರ ರಾಜಧಾನಿಯಲ್ಲಿನ ಮದ್ಯದ ವ್ಯಾಪಾರದಲ್ಲಿ ಕಾರ್ಟಲೈಸೇಶನ್ (ಉತ್ಪಾದಕರು, ಮಾರಾಟಗಾರರು, ವಿತರಕರು, ವ್ಯಾಪಾರಿಗಳು ಅಥವಾ ಸೇವಾ ಪೂರೈಕೆದಾರರ ಗುಂಪು) ಮತ್ತು ಏಕಸ್ವಾಮ್ಯಕ್ಕೆ ಅನುಕೂಲವಾಗುವಂತೆ ಕುಶಲತೆಯಿಂದ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಇದರಲ್ಲಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಉದ್ಯಮಿ ವಿಜಯ್ ನಾಯರ್ ಪ್ರಮುಖ ಪಾತ್ರವಿದೆ ಎಂದು ಸಿಬಿಐ ಈ ಹಿಂದೆ ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT