ಸಾಂದರ್ಭಿಕ ಚಿತ್ರ 
ದೇಶ

ಮಹಾರಾಷ್ಟ್ರ: ಚರಂಡಿ ಸ್ವಚ್ಛಗೊಳಿಸುವಾಗ ದುರಂತ, ವಿಷಾನಿಲ ಸೇವಿಸಿ 5 ಕಾರ್ಮಿಕರ ಸಾವು

ಒಳಚರಂಡಿ ದುರಸ್ತಿ ಮಾಡುವ ವೇಳೆ ವಿಷಾನಿಲ ಸೇವಿಸಿ 5 ಕಾರ್ಮಿಕರ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮುಂಬೈ: ಒಳಚರಂಡಿ ದುರಸ್ತಿ ಮಾಡುವ ವೇಳೆ ವಿಷಾನಿಲ ಸೇವಿಸಿ 5 ಕಾರ್ಮಿಕರ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದ ಪರಭಾನಿ ಜಿಲ್ಲೆಯ ಸೋನೆಪತ್ ತೆಹಸಿಲ್‌ನ ಭಾವುಚಾ ಗ್ರಾಮದಲ್ಲಿ ಸೆಪ್ಟಿಕ್ ಟ್ಯಾಂಕ್ ಸ್ವಚ್ಛ ಮಾಡುತ್ತಿದ್ದ ವೇಳೆ ಐವರು ಕಾರ್ಮಿಕರು ಸಾವಿಗೀಡಾಗಿದ್ದಾರೆ. ಗುರುವಾರ ರಾತ್ರಿ ಈ ಘಟನೆ ನಡೆದಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ.

ಮೃತರನ್ನು ಫಿರೋಜ್ ಶೇಖ್, ನವೇದ್ ಶೇಖ್, ಜುನೈದ್ ಶೇಖ್ ಮತ್ತು ಸಾದಿಕ್ ಶೇಖ್ ಎಂದು ಗುರುತಿಸಲಾಗಿದೆ. ಗಾಯಾಳು ಸಾಬೀರ್ ಶೇಖ್ ಅವರನ್ನು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂತಾಪ ಸೂಚಿಸಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ, ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಘೋಷಿಸಿದ್ದಾರೆ.

ಪರಭಾನಿ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಪ್ರಾರಂಭಿಸಿದ್ದಾರೆ. ವಿಷ ವಾಯು ಉಸಿರಾಟದಿಂದ ಸಾವಿಗೀಡಾಗಿರಬಹುದು ಎಂದು ಅಂದಾಜಿಸಲಾಗಿದೆ. ಪ್ರಸ್ತುತ ಮೃತ ಕಾರ್ಮಿಕರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್