ಸಾಂದರ್ಭಿಕ ಚಿತ್ರ 
ದೇಶ

ಉಪ ಚುನಾವಣೆ: ಜಲಂಧರ್‌ ಲೋಕಸಭಾ ಕ್ಷೇತ್ರದಲ್ಲಿ ಎಎಪಿ, ಜಾರ್ಸುಗುಡ ವಿಧಾನಸಭೆಯಲ್ಲಿ ಬಿಜೆಡಿ ಮುನ್ನಡೆ

ಜಲಂಧರ್ ಲೋಕಸಭೆ ಉಪ ಚುನಾವಣೆಯಲ್ಲಿ ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ಎಎಪಿ ಅಭ್ಯರ್ಥಿ ಸುಶೀಲ್ ರಿಂಕು ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕರಮ್‌ಜಿತ್ ಕೌರ್ ಚೌಧರಿ ಅವರಿಗಿಂತ 48,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವಿನತ್ತ ದಾಪುಗಾಲು ಹಾಕುತ್ತಿದ್ದಾರೆ.

ನವದೆಹಲಿ: ಜಲಂಧರ್ ಲೋಕಸಭೆ ಉಪ ಚುನಾವಣೆಯಲ್ಲಿ ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ಎಎಪಿ ಅಭ್ಯರ್ಥಿ ಸುಶೀಲ್ ರಿಂಕು ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕರಮ್‌ಜಿತ್ ಕೌರ್ ಚೌಧರಿ ಅವರಿಗಿಂತ 48,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವಿನತ್ತ ದಾಪುಗಾಲು ಹಾಕುತ್ತಿದ್ದಾರೆ.

ಚಲಾವಣೆಯಾದ 8.87 ಲಕ್ಷ ಮತಗಳ ಪೈಕಿ 7.10 ಲಕ್ಷಕ್ಕೂ ಹೆಚ್ಚು ಮತಗಳ ಎಣಿಕೆ ಪೂರ್ಣಗೊಂಡಿದೆ ಎಂದು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಒಡಿಶಾದ ಜಾರ್ಸುಗುಡ ವಿಧಾನಸಭಾ ಕ್ಷೇತ್ರಕ್ಕೆ ಶನಿವಾರ ನಡೆದ ಉಪಚುನಾವಣೆಯ 16ನೇ ಸುತ್ತಿನ ಮತ ಎಣಿಕೆಯ ನಂತರ ಆಡಳಿತಾರೂಢ ಬಿಜೆಡಿ ಅಭ್ಯರ್ಥಿ ದಿಪಾಲಿ ದಾಸ್ ಅವರು ಬಿಜೆಪಿಯ ಪ್ರತಿಸ್ಪರ್ಧಿ ಟಂಕಧರ್ ತ್ರಿಪಾಠಿ ಅವರಿಗಿಂತ 42,395 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

ದಿಪಾಲಿ ದಾಸ್ 94,326 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ 51,931 ಮತಗಳನ್ನು ಗಳಿಸಿದರು. ಕಾಂಗ್ರೆಸ್ ಅಭ್ಯರ್ಥಿ ತರುಣ್ ಪಾಂಡೆ 4,133 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ ಎಂದು ಚುಣಾವಣಾಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran war: ಅಲಿ ಖಮೇನಿ ಪುತ್ರ ಮೊಜ್ತಾಬಾ ಖಮೇನಿ ಇರಾನ್ ನೂತನ ಪರಮೋಚ್ಛ ನಾಯಕರಾಗಿ ಆಯ್ಕೆ

ರೋಚಕ ಎನಿಸುವ ಇರಾನ್ ಸಮರಾಂಗಣ ವಿಶ್ಲೇಷಣೆಗಳ ಅಸಲಿಯತ್ತೇನು? (ತೆರೆದ ಕಿಟಕಿ)

US-Israel Iran War: ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದೇ ಆದರೆ, ರಾಜ್ಯದ ಆರ್ಥಿಕತೆ ಮೇಲೆ ಭಾರೀ ಹೊಡೆತ..!

Israel Iran war: ಭಾರತಕ್ಕೆ ಬಿಗ್ ಶಾಕ್, ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!

Israel-Iran war: Dohaದಲ್ಲಿ ಸಿಲುಕಿದ Indian basketball team, ತಂಡದಲ್ಲಿದ್ದಾರೆ ಮೂವರು ಕನ್ನಡಿಗರು..!

SCROLL FOR NEXT