ಪ್ರಧಾನಿ ನರೇಂದ್ರ ಮೋದಿ 
ದೇಶ

ಕರ್ನಾಟಕದಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಗೆ ಪ್ರಧಾನಿ ಮೋದಿ ಅಭಿನಂದನೆ

ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಭರ್ಜರಿ ಬಹುಮತ ಪಡೆದಿರುವ ಕಾಂಗ್ರೆಸ್‌ಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ...

ನವದೆಹಲಿ: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ಭರ್ಜರಿ ಬಹುಮತ ಪಡೆದಿರುವ ಕಾಂಗ್ರೆಸ್‌ಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

"ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಈಡೇರಿಸಲು ನನ್ನ ಶುಭಾಶಯಗಳು. ಕರ್ನಾಟಕ ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ಬಿಜೆಪಿ ಕಾರ್ಯಕರ್ತರ ಶ್ರಮವನ್ನು ನಾನು ಪ್ರಶಂಸಿಸುತ್ತೇನೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಹುರುಪಿನಿಂದ ನಾವು ಕರ್ನಾಟಕದ ಸೇವೆ ಮಾಡುತ್ತೇವೆ’’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

224 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಪಡೆಯುವ ಮೂಲಕ ಭರ್ಜರಿ ಬಹುಮತದ ಪಡೆದಿದೆ. ಬಿಜೆಪಿ 65 ಸ್ಥಾನಗಳು ಹಾಗೂ ಜೆಡಿಎಸ್ 19 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ, ಇತರರು ನಾಲ್ಕು ಕ್ಷೇತ್ರಗಳಲ್ಲಿ ಜಯ ಗಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಅಲ್ಲಿ ಪ್ರತಿ ಮತದಾರನಿಗೂ photo ID’ಯಿದೆ: ಭಾರತದ ಚುನಾವಣಾ ವ್ಯವಸ್ಥೆ ಕೊಂಡಾಡಿದ ಟ್ರಂಪ್, ಅಮೆರಿಕಾ ಮತದಾನ ವ್ಯವಸ್ಥೆ ಬದಲಾವಣೆಗೆ ಪಟ್ಟು, SAVE America Act ಜಾರಿಗೆ ಆಗ್ರಹ..!

ಜಿಲ್ಲಾವಾರು ಕಾಂಗ್ರೆಸ್ ಶಾಸಕರೊಂದಿಗೆ ನಿಯಮಿತ ಸಭೆಗೆ ಸಿಎಂ ಡಿಕೆ. ಶಿವಕುಮಾರ್‌ ನಿರ್ಧಾರ..!

ಜಂತರ್ ಮಂತರ್‌ ಪ್ರತಿಭಟನೆ ಎಫೆಕ್ಟ್: ಮೋದಿ ಬೆಂಬಲಿಸಲು ಸರ್ಕಾರಿ ಹುದ್ದೆಗೆ ರಾಜೀನಾಮೆ ನೀಡಿದ ಪೊಲೀಸ್‌ ಕಾನ್‌ಸ್ಟೆಬಲ್‌!

ಬುರ್ಖಾ ಧರಿಸಿ ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನದ ನೆಕ್ಲೆಸ್ ಕದ್ದ ಮಹಿಳೆಯರು; ಖತರ್ನಾಕ್ ಕಳ್ಳಿಯರ "ಕೈ"ಚಳಕ CCTVಯಲ್ಲಿ ಸೆರೆ!

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ