ರಾಹುಲ್ ಗಾಂಧಿ 
ದೇಶ

ಕರ್ನಾಟಕದಲ್ಲಿ ದ್ವೇಷದ ಮಾರುಕಟ್ಟೆ ಮುಚ್ಚಿದೆ, ಪ್ರೀತಿಯಿಂದ ಜನರ ಮನಸ್ಸು ಗೆದ್ದಿದ್ದು, 5 ಭರವಸೆಗಳನ್ನು ಈಡೇರಿಸುತ್ತೇವೆ: ರಾಹುಲ್ ಗಾಂಧಿ

ನಾವು ಕರ್ನಾಟಕದ ಜನರ ಪರವಾಗಿ ನಿಂತಿದ್ದೇವೆ. ಬಡವರು ಕರ್ನಾಟಕದಲ್ಲಿ ಕ್ರೂರ ಬಂಡವಾಳಶಾಹಿಗಳನ್ನು ಸೋಲಿಸಿದ್ದಾರೆ. ನಾವು ದ್ವೇಷವನ್ನು ಬಳಸಿಕೊಂಡು ಈ ಯುದ್ಧವನ್ನು ಮಾಡಲಿಲ್ಲ. ಕರ್ನಾಟಕ ಚುನಾವಣೆಯಲ್ಲಿ ಪ್ರೀತಿ ಮತ್ತು ಸಹೋದರತ್ವದಿಂದ ಹೋರಾಡಿ ಗೆದ್ದಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: ನಾವು ಕರ್ನಾಟಕದ ಜನರ ಪರವಾಗಿ ನಿಂತಿದ್ದೇವೆ. ಬಡವರು ಕರ್ನಾಟಕದಲ್ಲಿ ಕ್ರೂರ ಬಂಡವಾಳಶಾಹಿಗಳನ್ನು ಸೋಲಿಸಿದ್ದಾರೆ. ನಾವು ದ್ವೇಷವನ್ನು ಬಳಸಿಕೊಂಡು ಈ ಯುದ್ಧವನ್ನು ಮಾಡಲಿಲ್ಲ. ಕರ್ನಾಟಕ ಚುನಾವಣೆಯಲ್ಲಿ ಪ್ರೀತಿ ಮತ್ತು ಸಹೋದರತ್ವದಿಂದ ಹೋರಾಡಿ ಗೆದ್ದಿದ್ದೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತದೊಂದಿಗೆ ಗೆದ್ದು ಸರ್ಕಾರ ರಚಿಸಲು ಸನ್ನದ್ಧವಾಗಿದ್ದು ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಕೂಡ ಸಂಭ್ರಮ ಮನೆಮಾಡಿದೆ. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಹಾಗೂ ನಮ್ಮ ಗೆಲುವಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಕರ್ನಾಟಕದಲ್ಲಿ ದ್ವೇಷದ ಮಾರುಕಟ್ಟೆ ಮುಚ್ಚಿದೆ. ಪ್ರೀತಿಯಿಂದ ಜನರನ್ನು ಗೆಲ್ಲಬಹುದು ಎಂದು ಇಂದಿನ ಚುನಾವಣೆ ಫಲಿತಾಂಶ ತೋರಿಸಿಕೊಟ್ಟಿದೆ. ರಾಜ್ಯದ ಜನತೆಗೆ ನನ್ನ ಹೃದಯದಾಳದಿಂದ ಕೃತಜ್ಞತೆ ಸಲ್ಲಿಸುತ್ತೇನೆ. ನಮ್ಮ ಮೊದಲ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕಕ್ಕೆ ನೀಡಿರುವ ಐದು ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಹೇಳಿದರು.

ಕರ್ನಾಟಕ ಚುನಾವಣೆಯಲ್ಲಿ ಬಹುಮತ ಸಿಗುತ್ತಿದ್ದಂತೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಇಂದು ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಹೇಳಿಕೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT