ದೇಶ

ಕಾಂಗ್ರೆಸ್ ಶಾಸಕರ ಅಭಿಪ್ರಾಯ ಸಂಗ್ರಹ: ಪ್ರಕ್ರಿಯೆ ಬಳಿಕ ಯಾವುದೇ ಪ್ರತಿಕ್ರಿಯೆ ನೀಡದೆ ಸಿದ್ದರಾಮಯ್ಯ ನಿರ್ಗಮನ!

Srinivas Rao BV

ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆ ಪ್ರಕ್ರಿಯೆ ಕಸರತ್ತು ಮುಂದುವರೆದಿದ್ದು, ತಡರಾತ್ರಿ 1 ಗಂಟೆ ವರೆಗೂ ನಗರದ ಶಾಂಗ್ರಿಲಾ ಹೊಟೆಲ್ ನಲ್ಲಿ ಕಾಂಗ್ರೆಸ್ ಹೈಕಮಾಂಡ್ ವೀಕ್ಷಕರು ಶಾಸಕರ ಅಭಿಪ್ರಾಯ ಸಂಗ್ರಹಿಸಿದರು. 

ರಾತ್ರಿ ಔತಣಕೂಟದ ಬಳಿಕ ಶಾಸಕರನ್ನು ಪ್ರತ್ಯೇಕವಾಗಿ ಕರೆಸಿ ವೀಕ್ಷಕರು ಅಭಿಪ್ರಾಯ ಸಂಗ್ರಹಿಸಿದ್ದಾರೆ. ತಟಸ್ಥವಾಗಿರುವವರೂ ತಮ್ಮ ಅಭಿಪ್ರಾಯ ತಿಳಿಸಿ ಎಂದು ಹೈಕಮಾಂಡ್ ಶಾಸಕರಿಗೆ ಸೂಚಿಸಿದ್ದರು. 

ಇದರಂತೆ ಶಾಸಕರು ಸಿಎಂ ಆಯ್ಕೆ ವಿಚಾರವಾಗಿ ಪ್ರತ್ಯೇಕವಾಗಿ ತೆರಳಿ ವೀಕ್ಷಕರೆದುರು ಅಭಿಪ್ರಾಯ ತಿಳಿಸಿದ್ದಾರೆ. 

ಪ್ರಕ್ರಿಯೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಉಸ್ತುವಾರಿ ರಣ್ದೀಪ್ ಸಿಂಗ್ ಸುರ್ಜೆವಾಲ, ಶಾಸಕರ ಅಭಿಪ್ರಾಯ ಸಂಗ್ರಹ ಪ್ರಕ್ರಿಯೆ ಮುಕ್ತಾಯವಾಗಿದೆ ಶಾಸಕರ ಅಭಿಪ್ರಾಯವನ್ನು ಹೈಕಮಾಂಡ್ ಗೆ ರವಾನೆ ಮಾಡಲಾಗುತ್ತದೆ. ಸಿಎಂ ಯಾರು ಆಗಲಿದ್ದಾರೆ ಎಂಬುದನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರ್ಧರಿಸಲಿದ್ದಾರೆ. ಅವರು ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಈ ನಡುವೆ ಶಾಸಕರ ಅಭಿಪ್ರಾಯ ಸಂಗ್ರಹದ ಬಳಿಕ ಸಿದ್ದರಾಮಯ್ಯ ಯಾವುದೇ ಪ್ರತಿಕ್ರಿಯೆ ನೀಡದೇ ನಿರ್ಗಮಿಸಿದರು.

SCROLL FOR NEXT