ಸಮೀರ್ ವಾಂಖೆಡೆ-ಆರ್ಯನ್ ಖಾನ್ 
ದೇಶ

'ದೇಶಭಕ್ತ ಎಂಬ ಕಾರಣಕ್ಕೆ ಶಿಕ್ಷೆಯಾಗುತ್ತಿದೆ', ಆರ್ಯನ್ ಖಾನ್ ಪ್ರಕರಣದಲ್ಲಿ ನಾನು 'ನಿರಪರಾಧಿ': ಸಮೀರ್ ವಾಂಖೆಡೆ

ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಬಂಧನದ ಪ್ರಕರಣದಲ್ಲಿ ನಾನು ನಿರಪರಾಧಿ ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ಮುಖ್ಯಸ್ಥರಾಗಿದ್ದ ಐಆರ್‌ಎಸ್ ಅಧಿಕಾರಿ ಸಮೀರ್ ವಾಂಖೆಡೆ ಹೇಳಿದ್ದು ನಾನು 'ದೇಶಭಕ್ತನಾಗಿದ್ದಕ್ಕಾಗಿ ಶಿಕ್ಷೆಯಾಗುತ್ತಿದೆ' ಎಂದು ಹೇಳಿದರು.

ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಬಂಧನದ ಪ್ರಕರಣದಲ್ಲಿ ನಾನು ನಿರಪರಾಧಿ ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ಮುಖ್ಯಸ್ಥರಾಗಿದ್ದ ಐಆರ್‌ಎಸ್ ಅಧಿಕಾರಿ ಸಮೀರ್ ವಾಂಖೆಡೆ ಹೇಳಿದ್ದು ನಾನು 'ದೇಶಭಕ್ತನಾಗಿದ್ದಕ್ಕಾಗಿ ಶಿಕ್ಷೆಯಾಗುತ್ತಿದೆ' ಎಂದು ಹೇಳಿದರು.

ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ವಿರುದ್ಧ ಪ್ರಕರಣ ದಾಖಲಿಸದಿರಲು ಸಮೀರ್ ವಾಂಖೆಡೆ ₹25 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂಬ ಆರೋಪವಿದೆ. ವಾಂಖೆಡೆ ನಿವಾಸ ಮತ್ತು ಇತರ ಸ್ಥಳಗಳ ಮೇಲೆ ಸಿಬಿಐ ಶುಕ್ರವಾರ ದಾಳಿ ನಡೆಸಿತು. ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಅವರನ್ನು ಸಿಲುಕಿಸದಿರಲು ₹25 ಕೋಟಿ ಲಂಚದ ಬೇಡಿಕೆ ಸಮೀರ್ ವಾಂಖೆಡೆ ವಿರುದ್ಧದ ಆರೋಪವಾಗಿದೆ. ಈ ಲಂಚದ ಮೊತ್ತದಲ್ಲಿ ₹ 50 ಲಕ್ಷ ಪಡೆದಿದ್ದಾರೆ ಎನ್ನಲಾಗಿದೆ. ಆರ್ಯನ್ ಖಾನ್ ಡ್ರಗ್ಸ್ ಆನ್ ಕ್ರೂಸ್ ಪ್ರಕರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಮೀರ್ ವಾಂಖೆಡೆ ಮತ್ತು ಇತರ ಮೂವರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.

ಸಮೀರ್ ವಾಂಖೆಡೆ ಸಹೋದರಿ ಯಾಸ್ಮಿನ್ ವಾಂಖೆಡೆ ಮನೆಯಲ್ಲಿ ₹28,000 ಮತ್ತು ತಂದೆ ಜ್ಞಾನೇಶ್ವರ್ ವಾಂಖೆಡೆ ಅವರ ಮನೆಯಿಂದ ₹28,000ವನ್ನು ಸಿಬಿಐ ವಶಪಡಿಸಿಕೊಂಡಿದೆ. ವಾಂಖೆಡೆ ಅವರ ಮಾವ ಮನೆಯಿಂದ 1800 ರೂ. ವಾಂಖೆಡೆ ಅವರ ಪತ್ನಿ ಮತ್ತು ಮಕ್ಕಳ ಸಮ್ಮುಖದಲ್ಲಿ ಅವರ ನಿವಾಸಿಯನ್ನು 12 ಗಂಟೆಗಳ ಕಾಲ ಹುಡುಕಲಾಯಿತು ಎಂದು ಹೇಳಿಕೆ ನೀಡಿದರು. ದಾಳಿ ವೇಳೆ ಅವರಿಗೆ 23,000 ರೂ. ಮತ್ತು ನಾಲ್ಕು ಆಸ್ತಿ ಪತ್ರಗಳು ಸಿಕ್ಕಿವೆ. ನಾನು ಸೇವೆಗೆ ಸೇರುವ ಮೊದಲು ಈ ಆಸ್ತಿಗಳನ್ನು ಖರೀದಿಸಿದ್ದೆ. ನಾನು ದೇಶಭಕ್ತನಾಗಿರುವುದಕ್ಕಾಗಿ ನನಗೆ ಬಹುಮಾನ ನೀಡಲಾಗುತ್ತಿದೆ ಎಂದು ಹೇಳಿದರು. 

2008ರ ಬ್ಯಾಚ್ IRS ಅಧಿಕಾರಿ ಸಮೀರ್ ವಾಂಖೆಡೆ ಅವರು ಕಾರ್ಡೆಲಿಯಾ ಕ್ರೂಸ್ ಹಡಗಿನ ಮೇಲೆ 2021ರ ಅಕ್ಟೋಬರ್ 2ರಂದು ದಾಳಿ ನಡೆಸಿದರು. ಈ ವೇಳೆ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರನ್ನು ಡ್ರಗ್ಸ್ ಹೊಂದಿದ್ದಕ್ಕಾಗಿ ಬಂಧಿಸಿದ್ದರು. ಆರ್ಯನ್ ಖಾನ್ 25 ದಿನ ಜೈಲಿನಲ್ಲಿ ಕಳೆದರು. 2021 ರಲ್ಲಿ, ಎನ್‌ಸಿಬಿ ತನ್ನ ಚಾರ್ಜ್‌ಶೀಟ್‌ನಲ್ಲಿ ಆರ್ಯನ್ ಖಾನ್‌ ಡ್ರಗ್ಸ್ ಸೇವಿಸಿದ್ದಾರೆ ಎಂಬುದಕ್ಕೆ ಸಾಕಷ್ಟು ಪುರಾವೆಗಳಿಲ್ಲ ಎಂದು ಕ್ಲೀನ್ ಚಿಟ್ ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT