ಅಪರಾಧ 
ದೇಶ

ಮಧ್ಯಪ್ರದೇಶ: ಮೂವರು ಅಪ್ರಾಪ್ತರಿಂದ 12 ವರ್ಷದ ಬಾಲಕನ ಭೀಕರ ಹತ್ಯೆ!

ಮೂವರು ಅಪ್ರಾಪ್ತ ಬಾಲಕರು- 12 ವರ್ಷದ ಮತ್ತೋರ್ವ ಬಾಲಕನನ್ನು ಹತ್ಯೆ ಮಾಡಿದ್ದಾರೆ.

ಭೋಪಾಲ್: ಮೂವರು ಅಪ್ರಾಪ್ತ ಬಾಲಕರು- 12 ವರ್ಷದ ಮತ್ತೋರ್ವ ಬಾಲಕನನ್ನು ಹತ್ಯೆ ಮಾಡಿದ್ದಾರೆ.

ಈ ಪೈಕಿ ಅತ್ಯಂತ ಕಿರಿಯ ಬಾಲಕ 11 ವರ್ಷದವನಿದ್ದಾನೆ. ಸೈಕಲ್ ಚೈನ್ ನಿಂದ ಹಲ್ಲೆ ನಡೆಸಿ ತಲೆಯನ್ನು ಕಲ್ಲಿನಿಂದ ಜಜ್ಜಿ, ಹರಿತವಾದ ಆಯುಧದಿಂದ ಬಾಲಕನ ಕತ್ತು ಸೀಳಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಪ್ರದೇಶದ ಸಿಯೋನಿ ಜಿಲ್ಲೆಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೊಲೆಯ ಬಳಿಕ ದೇಹವನ್ನು ಪಾಲಿಥಿನ್ ಬ್ಯಾಗ್ ನಲ್ಲಿ ಹಾಕಿ ಕಸದ ತೊಟ್ಟಿಗೆ ಎಸೆದಿದ್ದಾರೆ. ಆ ಪ್ರದೇಶದಲ್ಲಿ ಮಹಿಳೆಯೊಬ್ಬರು ರಕ್ತ ಸಿಕ್ತವಾದ ಬ್ಯಾಗ್ ನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಹಳೆ ಜಗಳವೇ ಕೊಲೆಗೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಮೂವರು ಬಾಲಕರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು 14 ದಿನಗಳ ಕಾಲ ಸುಧಾರಣಾ ಗೃಹಕ್ಕೆ ಕಳುಹಿಸಲಾಗಿದೆ. ಇಬ್ಬರು ಸಹೋದರರು ಸೇರಿದಂತೆ ಕ್ರಮವಾಗಿ 16, 14 ಮತ್ತು 11 ವರ್ಷ ವಯಸ್ಸಿನ ಮೂವರು 12 ವರ್ಷದ ಬಾಲಕನನ್ನು ಸಿಯೋನಿ ಜಿಲ್ಲಾ ಕೇಂದ್ರದಿಂದ 28 ಕಿಮೀ ದೂರದಲ್ಲಿರುವ ಮಗರ್‌ಕಥಾ ಗ್ರಾಮದ ನಿರ್ಜನ ಸ್ಥಳಕ್ಕೆ ಭಾನುವಾರ ಕರೆದಿದ್ದಾರೆ, "ಅವರು ಯೋಜಿಸಿ ಅಪರಾಧ ಕೃತ್ಯವನ್ನು ಎಸಗಿದ್ದಾರೆ  ಎಂದು ಬರ್ಘಾಟ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಪ್ರಸನ್ನ ಶರ್ಮಾ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT